ವಾಷಿಂಗ್ ಟನ್: ರಿಪಬ್ಲಿಕನ್ ಪಕ್ಷದಿಂದ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಡೊನಾಲ್ಡ್ ಟ್ರಂಪ್ ಇಂಡಿಯಾನದಲ್ಲಿ ನಡೆದ ಪ್ರೈಮರಿಯಲ್ಲಿ ಗೆಲುವು ಸಾಧಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರ ಪ್ರತಿಸ್ಪರ್ಧಿ ಟೆಡ್ ಕ್ರೂಝ್ ಪರಾಜಯಗೊಂಡಿದ್ದು, ಅಧ್ಯಕ್ಷೀಯ ಅಭ್ಯರ್ಥಿ ರೇಸ್ ನಿಂದ ಹೊರಬಿದ್ದಿದ್ದಾರೆ. ಅಧ್ಯಕ್ಷೀಯ ಅಭ್ಯರ್ಥಿಯಾಗಿ ನಾಮ ನಿರ್ದೇಶನಗೊಳ್ಳಲು ಅಗತ್ಯವಿರುವ 1 ,237 ಡೆಲಿಗೇಟ್ಸ್ ಮತಗಳನ್ನು ಪಡೆದಿರುವ ಡೊನಾಲ್ಡ್ ಟ್ರಂಪ್ ಅಧ್ಯಕ್ಷೀಯ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಳ್ಳುವ ಪ್ರಕ್ರಿಯೆಗೆ ಮತ್ತಷ್ಟು ಸನಿಹವಾಗಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.
ಇಂಡಿಯಾನದ ಪ್ರೈಮರಿಯಲ್ಲಿ ಗೆಲುವು ಸಾಧಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟ್ರಂಪ್, ನಾವು ಅಮೆರಿಕಾವನ್ನು ಮತ್ತೊಮ್ಮೆ ಅದ್ಭುತಗೊಳಿಸುತ್ತೇವೆ ಎಂದು ಹೇಳಿದ್ದಾರೆ. ಟ್ರಂಪ್ ಇಂಡಿಯಾನಾದ ಪ್ರೈಮರಿಯಲ್ಲಿ ಗೆಲುವು ಸಾಧಿಸಿರುವುದರಿಂದ ಅಧ್ಯಕ್ಷೀಯ ಅಭ್ಯರ್ಥಿಯಾಗುವ ಹಾದಿ ಮತ್ತಷ್ಟು ಸುಗಮವಾಗಿದೆ.