ಕಾಶ್ಮೀರ ವಿಷಯವಿಲ್ಲದೇ ಭಾರತ- ಪಾಕ್ ದ್ವಿಪಕ್ಷೀಯ ಮಾತುಕತೆ ಇಲ್ಲ: ಪಾಕ್ ಅಧಿಕಾರಿ
ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಯಲ್ಲಿ ಕಾಶ್ಮೀರ ವಿಷಯವನ್ನು ನಿರ್ಲಕ್ಷಿಸುವಂತಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಚೌಧರಿ ಹೇಳಿದ್ದಾರೆ.
ಇಸ್ಲಾಮಾಬಾದ್: ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಯಲ್ಲಿ ಕಾಶ್ಮೀರ ವಿಷಯವನ್ನು ನಿರ್ಲಕ್ಷಿಸುವಂತಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಚೌಧರಿ ಹೇಳಿದ್ದಾರೆ.
ದ್ವಿಪಕ್ಷೀಯ ಮಾತುಕತೆ ಬಗ್ಗೆ ಮಾತನಾಡಿರುವ ಅಜೀಜ್ ಚೌಧರಿ, ಪಾಕ್- ಭಾರತದ ದ್ವಿಪಕ್ಷಿಯ ಮಾತುಕತೆ ಯಾವಾಗ ನಡೆದರೂ ಅದರಲ್ಲಿ ಕಾಶ್ಮೀರವೇ ಪ್ರಮುಖ ವಿಷಯವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಬಂಧಿತ ಭಾರತೀಯ ಕುಲ್ ಭೂಷಣ್ ಯಾದವ್ ಬಗ್ಗೆಯೂ ಮಾತನಾಡಿರುವ ಚೌಧರಿ, ಬಲೂಚಿಸ್ತಾನದಲ್ಲಿ ಭಾರತದ ಗೂಢಚಾರ ಬಂಧನಕ್ಕೊಳಗಾಗಿರುವುದು, ಪಾಕಿಸ್ತಾನದ ಆಂತರಿಕ ವಿಚಾರಗಳಲ್ಲಿ ಭಾರತ ಹಸ್ತಕ್ಷೇಪ ಮಾಡುತ್ತಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದಾರೆ.
ಭಾರತ- ಪಾಕಿಸ್ತಾನದ ನಡುವಿನ ಮಾತುಕತೆ ಉತ್ತಮಗೊಳ್ಳಬೇಕೆಂದರೆ ನಂಬಿಕೆಯ ಕೊರತೆಯನ್ನು ದೂರಮಾಡಬೇಕು ಎಂದು ಅಜೀಜ್ ಚೌಧರಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.