ಜೈಶ್ ಇ ಮೊಹಮ್ಮದ್ ಸಂಘಟನೆ ಜೆಇಎಂ ಮುಖ್ಯಸ್ಥ ಮೌಲಾನಾ ಮಸೂದ್ ಅಜಾರ್ 
ವಿದೇಶ

ಜೆ-ಇ-ಎಂ ಉಗ್ರ ಸಂಘಟನೆಗೆ ಹಣ ನೀಡುತ್ತಿರುವವರ ಪತ್ತೆಗೆ ಅಮೆರಿಕದ ನೆರವು ಕೇಳಿದ ಎನ್ಐಎ

ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಹರಿದು ಬರುತ್ತಿರುವ ಹಣದ ಜಾಡು ಹಿಡಿಯಲು ಭಾರತದ ರಾಷ್ಟ್ರೀಯ...

ನವದೆಹಲಿ: ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಹರಿದು ಬರುತ್ತಿರುವ ಹಣದ ಜಾಡು ಹಿಡಿಯಲು ಭಾರತದ ರಾಷ್ಟ್ರೀಯ ತನಿಖಾ ತಂಡ(ಎನ್ಐ ಎ) ಅಮೆರಿಕದ ನೆರವು ಕೇಳಿದೆ. 
ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಯ ರೂವಾರಿ ಜೈಶ್ ಇ ಮೊಹಮ್ಮದ್ ಸಂಘಟನೆ ಜೆಇಎಂ ಮುಖ್ಯಸ್ಥ ಮೌಲಾನಾ ಮಸೂದ್ ಅಜಾರ್ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ದೊರೆತಿರುವ ಹಿನ್ನಲೆಯಲ್ಲಿ ಆತನಿಗೆ ಭಯೋತ್ಪದಾಕ ಕೃತ್ಯಕ್ಕೆ ಹಣದ ನೆರವು ನೀಡುತ್ತಿರುವವರನ್ನು ಪತ್ತೆ ಹಚ್ಚಲು ಅಮೆರಿಕದ ಸಹಾಯವನ್ನು ಎನ್ ಐಎ ಕೇಳಿದೆ ಎಂದು ಮೂಲಗಳು ತಿಳಿಸಿವೆ. 
ಆಲ್ ರಹಮತ್ ಎಂಬ ಟ್ರಸ್ಟ್ ಮೂಲಕ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ತನ್ನ ಭಯೋತ್ಪಾದಕ ಕೃತ್ಯಗಳಿಗೆ ದೇಣಿಗೆಯನ್ನು ಸಂಗ್ರಹಿಸುತ್ತಿದೆ. ಕೆಲವು ದೇಶಗಳಲ್ಲಿ ಈ ಸಂಘಟನೆಗೆ ನಿಷೇಧವೇರಲಾಗಿದೆ. ಆದರೆ ಪಾಕಿಸ್ತಾನದಲ್ಲಿ ಮಾತ್ರ ಇದಕ್ಕೆ ನಿಷೇಧವೇರಿಲ್ಲ. ಹಾಗಾಗಿ, ಈ ಉಗ್ರ ಸಂಘಟನೆಗೆ ದೇಣಿಗೆ ಎಲ್ಲಿಂದ ಹರಿದು ಬರುತ್ತಿದೆ ಎಂಬುದರ ಬಗ್ಗೆ ಪತ್ತೆಹಚ್ಚಲು ಅಮೆರಿಕದ ಸಹಾಯವನ್ನು  ಎನ್ ಐಎ ಕೇಳಿದೆ ಎನ್ನಲಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!