ಬಾಂಗ್ಲಾದಲ್ಲಿ ಹಿರಿಯ ಬೌದ್ಧಬಿಕ್ಕು ಮವಾಂಗ್ ಷೋ ವೂ ಹತ್ಯೆ
ನೆರೆಯ ಬಾಂಗ್ಲಾದೇಶದಲ್ಲಿ ಜಾತ್ಯತೀತ ಹೋರಾಟಗಾರರು ಹಾಗೂ ಅಲ್ಪಸಂಖ್ಯಾತ ಸಮುದಾಯದವರ ಹತ್ಯೆ ಮುಂದುವರೆದಿದ್ದು, 70 ವರ್ಷದ ಬೌದ್ಧ ಬಿಕ್ಕು ಮವಾಂಗ್ ಷೋ ವೂ...
ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ ಜಾತ್ಯತೀತ ಹೋರಾಟಗಾರರು ಹಾಗೂ ಅಲ್ಪಸಂಖ್ಯಾತ ಸಮುದಾಯದವರ ಹತ್ಯೆ ಮುಂದುವರೆದಿದ್ದು, 70 ವರ್ಷದ ಬೌದ್ಧ ಬಿಕ್ಕು ಮವಾಂಗ್ ಷೋ ವೂ ಅವರನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಹತ್ಯೆ ಮಾಡಿದ್ದಾರೆ.
ಢಾಕಾದ ಬಂದರಬನ್ ಹಿಲ್ಸ್ ಜಿಲ್ಲೆಯ ನೈಖಾಂಗಚಾರಿ ಪ್ರದೇಶದಲ್ಲಿರುವ ಬೌದ್ಧ ವಿಹಾರದ ಮುಖ್ಯಸ್ಥರಾಗಿದ್ದ ಮವಾಂಗ್ ಅವರನ್ನು ಅವರ ನಿವಾಸದಲ್ಲೇ ಹತ್ಯೆ ಮಾಡಲಾಗಿದೆ. ಭಕ್ತರೊಬ್ಬರು ಅವರಿಗೆ ಬೆಳಗಿನ ತಿಂಡಿ ಕೊಡಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ರಾತ್ರಿ ಮವಾಂಗ್ ಅವರು ತಮ್ಮ ನಿವಾಸದಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಅವರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ ಎಂದು ನೈಖಾಂಗಚಾರಿ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಖಾಜಿ ಅಹ್ಸನ್ ತಿಳಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.