ಯಾಂಗಾನ್: ಭಾರತೀಯ ಜಲಗಡಿಯೊಳಗೆ ಪ್ರವೇಶಿಸಿ ಶಿಕ್ಷೆಗೆ ಗುರಿಯಾಗಿದ್ದ ಮಾಯನ್ಮಾರ್ ನ 249 ಮೀನುಗಾರರ ಪೈಕಿ 129 ಮೀನುಗಾರರನ್ನು ಭಾರತ ಸರ್ಕಾರ ಬಿಡುಗಡೆ ಮಾಡಿದೆ.
ಭಾರತದಲ್ಲಿ ಶಿಕ್ಷೆಯನ್ನು ಅನುಭವಿಸುತ್ತಿದ್ದ 129 ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ. ಮಯಾನ್ಮಾರ್ ಸರ್ಕಾರ ಹಾಗೂ ಭಾರತ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆ ನಡೆದ ಬಳಿಕ ಮೀನುಗಾರರ ಬಿಡುಗಡೆ ಸಾಧ್ಯವಾಗಿದೆ ಎಂದು ಗೃಹ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೇ.31 ರ ರಾತ್ರಿ ಮೀನುಗಾರರನ್ನು ಬಿಡುಗಡೆ ಮಾಡಲಾಗಿದ್ದು, ಯಾನ್ಗಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ಭಾರತದ ಜಲಗಡಿಯ ಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ್ದ ಹಿನ್ನೆಲೆಯಲ್ಲಿ 249 ಮೀನುಗಾರರನ್ನು ಬಂಧಿಸಲಾಗಿತ್ತು.