ವಾಷಿಂಗ್ಟನ್: ಕ್ಯಾಲಿಫೋರ್ನಿಯಾದ ಎರಡು ಮತಗಟ್ಟೆ ಕೇಂದ್ರದ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಸಾವನ್ನಪ್ಪಿ, ಮೂವರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ನಡೆದಿದೆ.
ಪೂರ್ವ ಲಾಸ್ ಏಂಜಲೀಸ್ ನಲ್ಲಿರುವ ಅಜುಸಾ ಸಿಟಿಯ ಬಳಿಯಿರುವ ಮತಗಟ್ಟೆ ಕೇಂದ್ರದ ಬಳಿ ಬಂದಿರುವ ದುಷ್ಕರ್ಮಿಗಳು ಏಕಾಏಕಿ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿ, ಮೂವರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದಾಳಿ ನಡೆಸಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.