ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ: ಆಘಾತ, ಭಯ ವ್ಯಕ್ತಪಡಿಸಿದ ಅಮೆರಿಕ ಮುಸ್ಲಿಮರು
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ಹೊಂದಿರುವ ಡೊನಾಲ್ಡ್ ಟ್ರಂಪ್, ಅಮೆರಿಕಾದ ನೂತನ ಅಧ್ಯಕ್ಷರಾಗಿ ಆಯ್ಕೆಗೊಳ್ಳುತ್ತಿದ್ದಂತೆಯೇ ಅಮೆರಿಕದ ಮುಸ್ಲಿಮರು ಅಘಾತ, ಭಯ ವ್ಯಕ್ತಪಡಿಸಿದ್ದಾರೆ.
ವಾಷಿಂಗ್ ಟನ್: ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ಹೊಂದಿರುವ ಡೊನಾಲ್ಡ್ ಟ್ರಂಪ್, ಅಮೆರಿಕಾದ ನೂತನ ಅಧ್ಯಕ್ಷರಾಗಿ ಆಯ್ಕೆಗೊಳ್ಳುತ್ತಿದ್ದಂತೆಯೇ ಅಮೆರಿಕದ ಮುಸ್ಲಿಮರು ಅಘಾತ, ಭಯ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕನ್ ಪಕ್ಷದಿಂದ ಸ್ಪರ್ಧಿಸಿ ಅಧ್ಯಕ್ಷರಾಗಿರುವ ಡೊನಾಲ್ಡ್ ಟ್ರಂಪ್ ಅಭ್ಯರ್ಥಿಯಾಗಿ ಆಯ್ಕೆಯಾದಾಗಿನಿಂದಲೂ ಇಸ್ಲಾಂ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವು ಪ್ರಕಟಿಸಿದ್ದರು. ಅಷ್ಟೇ ಅಲ್ಲದೇ ಅಮೆರಿಕಾಗೆ ಮುಸ್ಲಿಮರು ಪ್ರವೇಶಿಸುವುದಕ್ಕೆ ನಿಷೇಧ ವಿಧಿಸಲಾಗುವುದು ಎಂದು ಹೇಳಿದ್ದರು.
ಅಮೆರಿಕ-ಇಸ್ಲಾಮಿಕ್ ಸಂಬಂಧಗಳ ಪರಿಷತ್ ನಡೆಸಿದ್ದ ಸಮೀಕ್ಷೆ ಪ್ರಕಾರ 10 ಮುಸ್ಲಿಮರ ಪೈಕಿ 7 ಮುಸ್ಲಿಮರು ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಗೆ ಮತಚಲಾಯಿಸುವುದಾಗಿ ತಿಳಿಸಿದ್ದರು. ಡೊನಾಲ್ಡ್ ಟ್ರಂಪ್ ಆಯ್ಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಿ ರಾಜಕೀಯ ವಿಶ್ಲೇಷಕ ಖಾಲಿದ್ " ನಮ್ಮ ಕೆಟ್ಟ ದುಃಸ್ವಪ್ನ ವಾಸ್ತವವಾಗಿದೆ. ಧರ್ಮಾಂಧತೆ, ಸ್ತ್ರೀದ್ವೇಷ, ಮತ್ತು ಮುಸ್ಲಿಮರ ದೂಷಣೆಗಳ ಮೇಲೆಯೇ ತನ್ನ ವೇದಿಕೆ ನಿರ್ಮಿಸಿಕೊಂಡಿದ್ದ ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನು ಡೊನಾಲ್ಡ್ ಟ್ರಂಪ್ ಆಯ್ಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಸ್ಲಿಮ್ ವಿದ್ವಾಂಸ ಯಾಸೀರ್, ನಾವೆಲ್ಲರೂ ಅತ್ಯಂತ ಆತಂಕಕ್ಕೊಳಗಾಗಿದ್ದೇವೆ, ಹಿಜಾಬ್ ಧರಿಸಿರುವ ನನ್ನ ಪತ್ನಿಯ ಸುರಕ್ಷತೆಯ ಬಗ್ಗೆ ನನಗೆ ಆತಂಕ ವ್ಯಕ್ತವಾಗುತ್ತಿದೆ. ರಸ್ತೆಯಲ್ಲಿ ಅಡ್ಡಾಡುವ ನನ್ನ ಮಕ್ಕಳ ಬಗ್ಗೆ ಆತಂಕವಾಗುತ್ತಿದೆ ಎಂದು ಹೇಳಿದ್ದಾರೆ.
ಅಮೆರಿಕಾ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿರುವುದು ಎಲ್ಲರನ್ನೂ ಒಳಗೊಳ್ಳುವುದನ್ನು ತ್ಯಜಿಸಿರುವ ಅಮೆರಿಕ, ಸಹಿಷ್ಣುತೆ ಕಡಿಮೆಯಾಗಿರುವ ಅಮೆರಿಕವಾನ್ನು ಪ್ರತಿನಿಧಿಸುತ್ತದೆ ಎಂದು ಟೆಕ್ಸಸ್ ನಲ್ಲಿರುವ ವಿವಿಯ ಪ್ರೊಫೆಸರ್ ಸಹಾರ್ ಅಜೀಜ್ ಆತಂಕ ವ್ಯಕ್ತಪಡಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.