ಟೋಕಿಯೋ: ಆರು ವರ್ಷಗಳ ಮಾತುಕತೆ ಬಳಿಕ ಮಹತ್ವದ ನಾಗರಿಕ ಪರಮಾಣು ಒಪ್ಪಂದಕ್ಕೆ ಭಾರತ-ಜಪಾನ್ ಸಹಿ ಹಾಕಿವೆ.
ಮೂರು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಟೋಕಿಯೋದಲ್ಲಿ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಒಪ್ಪಂದದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ನಾಗರೀಕ ಬಳಕೆಗಾಗಿ ಪರಸ್ಪರ ಸಹಕಾರಕ್ಕೆ ಭಾರತ-ಜಪಾನ್ ತೀರ್ಮಾನಿಸಲಾಗಿದ್ದು, ಇದೊಂದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿದ್ದಾರೆ.
ಕಳೆದ ಡಿಸೆಂಬರ್ ನಲ್ಲಿ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಭಾರತಕ್ಕೆ ಬಂದಿದ್ದಾಗ ನಾಗರಿಕ ಪರಮಾಣು ಒಪ್ಪಂದದ ಬಗ್ಗೆ ಮಾತುಕತೆ ನಡೆದಿದ್ದು ಇದೀಗ ಫಲಪ್ರದವಾಗಿದೆ ಎಂದರು. ಇನ್ನು ಜಗತ್ತನ್ನೇ ಪೀಡಿಸುತ್ತಿರುವ ಭಯೋತ್ಪಾದನೆ ವಿರುದ್ಧ ಉಭಯ ದೇಶಗಳು ಜಂಟಿಯಾಗಿ ಹೋರಾಟ ನಡೆಸುತ್ತೇವೆ ಎಂದರು.