ವಿದೇಶ

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ, 30ಕ್ಕೂ ಹೆಚ್ಚು ಸಾವು

Lingaraj Badiger
ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ್‌ ಪ್ರಾಂತ್ಯದ ಷಾ ನೂರಾನಿ ಯಾತ್ರಾಸ್ಥಳದಲ್ಲಿ ಶನಿವಾರ ಸಂಭವಿಸಿದ ಬಾಂಬ್‌ ಸ್ಫೋಟದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಯಾತ್ರಾಸ್ಥಳಕ್ಕೆ ಶುಕ್ರವಾರಗಳಲ್ಲಿ ಹೆಚ್ಚಿನ ಸಂಖ್ಯೆಯ ಯಾತ್ರಿಗಳು ಬರುತ್ತಾರೆ. ಶುಕ್ರವಾರ ಬರುವ ಯಾತ್ರಿಗಳು ಶನಿವಾರ ಇಲ್ಲಿಂದ ಹಿಂದಿರುಗುತ್ತಾರೆ. ಯಾತ್ರಿಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಯಾತ್ರಾಸ್ಥಳಕ್ಕೆ ಹೋಗಿ ಬರುವ ಮಾರ್ಗ ಅಷ್ಟು ಅನುಕೂಲಕರವಾಗಿಲ್ಲ. ಹತ್ತಿರದಲ್ಲಿ ಯಾವುದೇ ಆಸ್ಪತ್ರೆಗಳಿಲ್ಲ. ಹೀಗಾಗಿ ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕರಾಚಿಗೆ ಕಳಿಸಲಾಗಿದೆ ಎಂದು ವರದಿ ಮಾಡಲಾಗಿದೆ.
SCROLL FOR NEXT