ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಆಫ್ಘಾನಿಸ್ತಾನ: ಅಮೆರಿಕ ಸೇನಾ ಕೇಂದ್ರದ ಮೇಲೆ ದಾಳಿ - 4 ಸಾವು

ಆಫ್ಘಾನಿಸ್ತಾನದಲ್ಲಿರುವ ಅಮೆರಿಕ ರಾಷ್ಟ್ರ ಅತ್ಯಂತ ದೊಡ್ಡ ಸೇನಾ ನೆಲೆಯ ಮೇಲೆ ಆತ್ಮಾಹುತಿ ದಾಳಿಯನ್ನು ನಡೆಸಲಾಗಿದ್ದು, ದಾಳಿಯಲ್ಲಿ ನಾಲ್ವರು ಮೃತಪಟ್ಟು ಹಲವರಿಗೆ ಗಾಯವಾಗಿರುವ...

ಆಫ್ಘಾನಿಸ್ತಾನ: ಅಮೆರಿಕ ಸೇನಾ ಕೇಂದ್ರದ ಮೇಲೆ ದಾಳಿ - 4 ಸಾವು
Manjula VN
Updated On : 13 Nov 2016, 10:27 am

ಕಾಬುಲ್: ಆಫ್ಘಾನಿಸ್ತಾನದಲ್ಲಿರುವ ಅಮೆರಿಕ ರಾಷ್ಟ್ರ ಅತ್ಯಂತ ದೊಡ್ಡ ಸೇನಾ ನೆಲೆಯ ಮೇಲೆ ಆತ್ಮಾಹುತಿ ದಾಳಿಯನ್ನು ನಡೆಸಲಾಗಿದ್ದು, ದಾಳಿಯಲ್ಲಿ ನಾಲ್ವರು ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ನಡೆದಿದೆ.

ಕಾರ್ಮಿಕನ ವೇಷ ಧರಿಸಿ ಬಂದಿರುವ ಅತ್ಮಾಹುತಿ ದಾಳಿಕೋರ ದಾಳಿ ನಡೆಸಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆತ್ಮಾಹುತಿ ದಾಳಿಯ ಹೊಣೆಯನ್ನು ತಾಲಿಬಾನ್ ಉಗ್ರ ಸಂಘಟನೆ ಹೊತ್ತುಕೊಂಡಿದೆ ಎಂದುಪ ತಿಳಿದುಬಂದಿದೆ. ಘಟನೆಯಲ್ಲಿ ಅಮೆರಿಕ ರಾಷ್ಟ್ರದ ಇಬ್ಬರು ಯೋಧರು, ಇಬ್ಬರು ಗುತ್ತಿಗೆದಾರರು ಸೇರಿದಂತೆ 16 ಮಂದಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದೆ.

ಅಫ್ಘಾನಿದಲ್ಲಿರುವ ಅಮೆರಿಕ ಕೇಂದ್ರಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗಿರುತ್ತದೆ. ಭದ್ರತೆಯ ನಡುವೆಯೂ ದಾಳಿಯನ್ನು ನಡೆಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಭದ್ರತೆ ಕುರಿತಂತೆ ಮತ್ತಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಪಾಗುತ್ತದೆ ಎಂದು ರಕ್ಷಣಾ ಕಾರ್ಯದರ್ಶಿ ಕಾರ್ಟರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments