ವಾಷಿಂಗ್ಟನ್: ಕ್ಯಾಲಿಫೋರ್ನಿಯಾ ಸೆನೆಟರ್ ಮತ್ತು ಅಟಾರ್ನಿ ಜನರಲ್ ಆಗಿ ಆಯ್ಕೆಯಾಗಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗುವ ಸಾಮರ್ಥ್ಯವಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.
ಡೆಮೊಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಡೊನಾಲ್ಡ್ ಟ್ರಂಪ್ ವಿರುದ್ಧ ಸೋಲು ಕಂಡಿರುವ ಹಿಲರಿ ಕ್ಲಿಂಟನ್ ಗಿಂತಲೂ ಹೆಚ್ಚು ಪ್ರಭಾವಶಾಲಿಯಾಗಿ ಹೊರಹೊಮ್ಮಿರುವ ಕಮಲಾ ಹ್ಯಾರಿಸ್ ಅಮೆರಿಕದ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗುವುದು ಖಚಿತ ಎಂದು ಮಾಧ್ಯಮಗಳು ವಿಶ್ಲೇಷಿಸಿವೆ.
ಕ್ಯಾಲಿಫೋರ್ನಿಯಾದಿಂದ ಸೆನೆಟ್ ಸ್ಥಾನಕ್ಕೆ ದಾಖಲೆ ಗೆಲುವಿನೊಂದಿಗೆ ಜಯಭೇರಿ ಸಾಧಿಸಿರುವ ಕಮಲಾ ಹ್ಯಾರಿಸ್ ಜನಪ್ರಿಯತೆಯ ಉತ್ತುಂಗದಲ್ಲಿದ್ದಾರೆ. ಇದೀಗ ಹೀಗೆ ಮುಂದುವರೆದರೆ 2020ರ ವೇಳೆಗೆ ಕಮಲಾ ಅಮೆರಿಕದ ಅಧ್ಯಕ್ಷೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ದಿ ಹಫಿಂಗ್ಟನ್ ಪೋಸ್ಟ್ ಹೇಳಿದೆ.