ನಿಕ್ಕಿ ಹ್ಯಾಲಿ 
ವಿದೇಶ

ಟ್ರಂಪ್ ಸಂಪುಟದಲ್ಲಿ ಭಾರತೀಯ ಮೂಲದ ನಿಮ್ರತಾ ನಿಕ್ಕಿ ಹ್ಯಾಲಿಗೆ ಸ್ಥಾನ?

ಟ್ರಂಪ್ ಸಂಪುಟದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚಿದೆ.

ನ್ಯೂಯಾರ್ಕ್: ಇತ್ತೀಚೆಗಷ್ಟೇ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡೊನಾಲ್ಡ್ ಟ್ರಂಪ್ ಅವರ ತಂಡ ಅಧಿಕಾರ ಹಸ್ತಾಂತರ ಪ್ರಕ್ರಿಯೆಯಲ್ಲಿ ತೊಡಗಿದ್ದು, ಟ್ರಂಪ್ ಸಂಪುಟದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚಿದೆ. 
ಅಮೆರಿಕದ ದಕ್ಷಿಣ ಕರೊಲಿನದ ಗೌರ್ನರ್ ಆಗಿರುವ ಭಾರತೀಯ ಮೂಲದ ನಿಕ್ಕಿ ಹ್ಯಾಲಿ ಅವರು ಟ್ರಂಪ್ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಹ್ಯಾಲಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಿ ಮಾತನಾಡಿರುವುದು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.   
ನಿಕ್ಕಿ ಹ್ಯಾಲಿ ಅವರಿಗೆ ಅಮೆರಿಕದ ವಿದೇಶಾಂಗ ಸಚಿವ ಸ್ಥಾನ ಅಥವಾ ವಾಣಿಜ್ಯ ಸಚಿವಾಲಯದ ಹೊಣೆಗಾರಿಕೆ ಸಿಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹ್ಯಾಲಿ ಅವರ ಪೋಷಕರು ಅಮೆರಿಕಾಗೆ ವಲಸೆ ಹೋದ ಭಾರತೀಯರಾಗಿದ್ದು, ಪ್ರಾರಂಭಿಕ ಚುನಾವಣೆಗಳಲ್ಲಿ ಹ್ಯಾಲಿ ಡೊನಾಲ್ಡ್ ಟ್ರಂಪ್ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ್ದರು, ನಂತರ ಡೊನಾಲ್ಡ್ ಟ್ರಂಪ್ ಪರವಾಗಿ ಮತಚಲಾವಣೆ ಮಾಡಿದ್ದರು. ರಿಪಬ್ಲಿಕನ್ ಪಕ್ಷದ ಗೌರ್ನರ್ ಗಳ ಒಕ್ಕೂಟದ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಬೆನ್ನಲ್ಲೇ ನಿಕ್ಕಿ ಹ್ಯಾಲಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್- ನಿಕ್ಕಿ ಹ್ಯಾಲಿ ಸೌಹಾರ್ದಯುತ ಮಾತುಕತೆ ನಡೆಸಿದ್ದು, ಟ್ರಂಪ್ ಅವಧಿಯಲ್ಲಿ ಉತ್ತಮ ಆಡಳಿತವನ್ನು ಎದುರುನೋಡುತ್ತಿರುವುದಾಗಿ ನಿಕ್ಕಿ ಹ್ಯಾಲಿ ಹೇಳಿದ್ದಾರೆ ಎಂದು ಹ್ಯಾಲಿ ಅವರ ಕಾರ್ಯದರ್ಶಿ ತಿಳಿಸಿದ್ದಾರೆ. ನಿಮ್ರತಾ ನಿಕ್ಕಿ ಹ್ಯಾಲಿ ದಕ್ಷಿಣ ಕರೊಲಿನಾದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮೊದಲ ಗೌರ್ನರ್ ಆಗಿದ್ದು, ಅಮೆರಿಕದ ಅಧ್ಯಕ್ಷರ ಸಂಪುಟದಲ್ಲಿ ಸ್ಥಾನ ಪಡೆಯಲಿರುವ ಎರಡನೇ ಭಾರತೀಯ ಮೂಲದ ಅಮೆರಿಕಾದ ಪ್ರಜೆಯಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ