ಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾದ ಮೊಜಾಂಬಿಕನ್ ನಲ್ಲಿ ಟ್ಯಾಂಕರ್ ವೊಂದು ಸ್ಫೋಟಗೊಂಡಿದ್ದು, ಪರಿಣಾಮ 73 ಮಂದಿ ಸಾವನ್ನಪ್ಪಿ 100ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.
ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನ್ನು ಚಾಲನೆ ಮಾಡುತ್ತಿದ್ದ ಚಾಲಕ ಜನರಿಗೆ ಪೆಟ್ರೋಲ್ ನೀಡುವ ಸಲುವಾಗಿ ರಸ್ತೆ ಬದಿಯಲ್ಲಿ ಟ್ಯಾಂಕರ್ ನ್ನು ನಿಲ್ಲಿಸಿದ್ದಾನೆ. ಸ್ಥಳದಲ್ಲಿ ಪೆಟ್ರೋಲ್ ತೆಗೆದುಕೊಳ್ಳಲು ಸಾಕಷ್ಟು ಜನರು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಟ್ಯಾಂಕರ್ ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಸ್ಥಳದಲ್ಲಿಯೇ 73 ಮಂದಿ ದುರ್ಮರಣವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಈಗಾಗಲೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.