ಮೈಕೆಲ್ ಫ್ಲಿನ್ ಹಾಗೂ ಡೊನಾಲ್ಡ್ ಟ್ರಂಪ್ (ಸಂಗ್ರಹ ಚಿತ್ರ) 
ವಿದೇಶ

ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮೈಕೆಲ್ ಫ್ಲಿನ್ ಆಯ್ಕೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿವೃತ್ತ ಸೇನಾಧಿಕಾರಿ ಮೈಕೆಲ್ ಫ್ಲಿನ್ ಅವರನ್ನು ತಮ್ಮ ಸಲಹೆಗಾರರಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿವೃತ್ತ ಸೇನಾಧಿಕಾರಿ ಮೈಕೆಲ್ ಫ್ಲಿನ್ ಅವರನ್ನು ತಮ್ಮ ಸಲಹೆಗಾರರಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಬಹಿರಂಗವಾಗಿಯೇ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದ ಮೈಕೆಲ್ ಫ್ಲಿನ್ ಅವರನ್ನು ತಮ್ಮ ಸಲಹೆಗಾರರಾಗಿ ನೇಮಕ ಮಾಡುವ ಮೂಲಕ ಟ್ರಂಪ್ ಅಚ್ಚರಿ ಮೂಡಿಸಿದ್ದಾರೆ.  ಒಂದು ಕಾಲದಲ್ಲಿ ಇಸ್ಲಾಮಿಕ್ ಸಿದ್ಧಾಂತವನ್ನು ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಠೋರವಾಗಿ ಟೀಕಿಸಿ (ಕು)ಖ್ಯಾತಿಗಳಿಸಿದ್ದ ಲೆಫ್ಟಿನೆಂಟ್ ಜನರಲ್ ಮೈಕೆಲ್ ಫ್ಲಿನ್ ಅವರಿಗೆ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು,  ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಆಯ್ಕೆ ಮಾಡಿದ್ದಾರೆ.

ಆದರೆ ಮೈಕೆಲ್ ಫ್ಲಿನ್ ಅವರ ನೇಮಕಕ್ಕೆ ಸೆನೆಟ್ ಅನುಮೋದನೆ ದೊರೆತಿಲ್ಲ. ಶೀಘ್ರದಲ್ಲೇ ಸೆನೆಟ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ಇನ್ನು ಲೆಫ್ಟಿನೆಂಟ್ ಜನರಲ್ ಮೈಕೆಲ್ ಫ್ಲಿನ್ ಅವರ ಹಿನ್ನಲೆ ಗಮನಿಸಿದರೆ, ಈ ಹಿಂದೆ ಆಫ್ಘಾನಿಸ್ತಾನ ಹಾಗೂ ಇರಾಕ್ ನಲ್ಲಿ ಉಗ್ರರನ್ನು ಮಟ್ಟಹಾಕುವಲ್ಲಿ ಫ್ಲಿನ್ ಮಹತ್ತರ ಪಾತ್ರ ನಿರ್ವಹಿಸಿದ್ದರು. ಇದೇ ಸಂದರ್ಭದಲ್ಲೇ ಪಾಕಿಸ್ತಾನದ  ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದ ಫ್ಲಿನ್, ಪಾಕಿಸ್ತಾನ ಭಯೋತ್ಪಾದನೆಯ ಪ್ರಾಯೋಜಕತ್ವವನ್ನು ನಿಲ್ಲಿಸದಿದ್ದರೆ, ಆ ದೇಶಕ್ಕೆ ನೀಡಲಾಗುತ್ತಿರುವ ಆರ್ಥಿಕ ನೆರವನ್ನು ಕೂಡಲೇ ನಿಲ್ಲಿಸಬೇಕು ಎಂದು ಹೇಳುವ ಮೂಲಕ ವಿವಾದಕ್ಕೆ  ಕಾರಣರಾಗಿದ್ದರು. ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಅವರನ್ನು ಫ್ಲಿನ್ ಬಹಿರಂಗವಾಗಿ ಬೆಂಬಲಿಸಿದ್ದಲ್ಲದೇ, ಟ್ರಂಪ್ ಅಧ್ಯಕ್ಷಗಾದಿಗೆ ಸ್ಪರ್ಧಿಸುವುದು ಖಚಿತವಾದ ಬಳಿಕ ಫ್ಲಿನ್ ಅವರಿಗೆ ಮಿಲಿಟರಿ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT