ದುರಂತ ನಡೆದ ಸ್ಥಳ (ಕ್ಸಿನ್ ಹುವಾ ಚಿತ್ರ) 
ವಿದೇಶ

ಚೀನಾದಲ್ಲಿ ನಿರ್ಮಾಣ ಹಂತದ ವಿದ್ಯುತ್ ಘಟಕ ಕುಸಿತ, 40 ಮಂದಿ ಸಾವು

ಚೀನಾದಲ್ಲಿ ನಿರ್ಮಾಣ ಹಂತದ ವಿದ್ಯುತ್ ಘಟಕ ಕುಸಿದು ಬಿದ್ದ ಕಾರಣ ಬರೊಬ್ಬರಿ 40 ಕಾರ್ಮಿಕರು ದುರಂತ ಸಾವಿಗೀಡಾಗಿದ್ದಾರೆ.

ಬೀಜಿಂಗ್‌: ಚೀನಾದಲ್ಲಿ ನಿರ್ಮಾಣ ಹಂತದ ವಿದ್ಯುತ್ ಘಟಕ ಕುಸಿದು ಬಿದ್ದ ಕಾರಣ ಬರೊಬ್ಬರಿ 40 ಕಾರ್ಮಿಕರು ದುರಂತ ಸಾವಿಗೀಡಾಗಿದ್ದಾರೆ.

ಚೀನಾದ ಜಿಯಾಂಗ್ಸಿಯಲ್ಲಿರುವ ಫೆಂಗ್‌ಶೆಂಗ್‌ ಪ್ರಾಂತ್ಯದಲ್ಲಿ ಈ ದುರಂತ ಸಂಭವಿಸಿದ್ದು, ವಿದ್ಯುತ್ ಘಟಕದ ಬೃಹತ್ ಟವರ್ ಕುಸಿದ ಪರಿಣಾಮ ಸುಮಾರು 40 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.  ಅವಶೇಷಗಳಡಿಯಲ್ಲಿ ಇನ್ನೂ ಸಾಕಷ್ಟು ಮಂದಿ ಸಿಲುಕಿದ್ದು, ಅವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಗುರುವಾರ ಮುಂಜಾನೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ಟವರ್ ನೆಲಕ್ಕುರುಳಿದ್ದು, ದುರಂತ ಸಂದರ್ಭದಲ್ಲಿ ನೂರಾರು ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗದಿ  ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿ ಎದುರಾಗಿದೆ. ಕಳೆದ ಜುಲೈ ತಿಂಗಳಿನಲ್ಲಿ ಇಲ್ಲಿ ತಲಾ 1,000 ಮಗಾ ವ್ಯಾಟ್‌ ಸಾಮರ್ಥ್ಯದ ಕಲ್ಲಿದ್ದಲು ವಿದ್ಯುತ್‌ ಉತ್ಪಾದನಾ ಘಟಕ ನಿರ್ಮಾಣ ಕಾರ್ಯವನ್ನು  ಆರಂಭಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ