ಹೂಸ್ಟನ್: ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿರುವ ನ್ಯೂ ಓರ್ಲಿಯಾನ್ಸ್ ನಲ್ಲಿ ಶಸ್ತ್ರಾಸ್ತ್ರಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ 9 ಮಂದಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ನ್ಯೂ ಓರ್ಲಿಯಾನ್ಸ್ ನಲ್ಲಿರು ಪ್ರವಾಸಿಗರ ತಾಣ ಫ್ರೆಂಜ್ ಕ್ವಾರ್ಟರ್ ನಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಗೆ ವ್ಯಕ್ತಿಯೊರ್ವ ಸಾವನ್ನಪ್ಪಿದ್ದಾನೆಂದು ವರದಿಗಳು ತಿಳಿಸಿವೆ.
ನಿನ್ನೆ ಮಧ್ಯಾಹ್ನ 1.30ರ ಸುಮಾರಿಗೆ ಶಸ್ತ್ರಾಸ್ತ್ರಧಾರಿಗಳು ಪ್ರವಾಸಿಗರ ನೆಚ್ಚಿನ ತಾಣವಾದ ಫ್ರೆಂಜ್ ಕ್ವಾರ್ಟರ್ ಮೇಲೆ ದಾಳಿ ನಡೆಸಿದ್ದರು. ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ 9 ಮಂದಿಗೆ ಗಂಭೀರವಾದ ಗಾಯಗೊಂಡಿದ್ದರು. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಗೆ ಈ ವರೆಗೂ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.