ಇಸ್ಲಾಮಾಬಾದ್: ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ದೂರವಾಣಿ ಮೂಲಕ ಮಾತನಾಡಿರುವ ಬಗ್ಗೆ ಪಾಕಿಸ್ತಾನದ ವಿಪಕ್ಷ ನಾಯಕ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ನವಾಜ್ ಷರೀಫ್ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿದ ಮಾತ್ರಕ್ಕೆ ಷರೀಫ್ ಪನಾಮಾ ಪೇಪರ್ ಹಗರಣದಿಂದ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನವಾಜ್ ಷರೀಫ್ ಗೆ ಯಾವುದೇ ವೈಯಕ್ತಿಕ ಲಾಭ ಆಗದೇ ಇದ್ದರೂ, ಡೊನಾಲ್ಡ್ ಟ್ರಂಪ್ ಪ್ರಧಾನಿಯೊಂದಿಗೆ ಮಾತನಾಡಿರುವುದು ಪಾಕಿಸ್ತಾನದ ಮಟ್ಟಿಗೆ ಉತ್ತಮ ಬೆಳವಣಿಗೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಲು ಪ್ರಧಾನಿ ನವಾಜ್ ಷರೀಫ್ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕರೆ ಮಾಡಿ ಮಾತನಾಡಿದ್ದರು.