ಹೈಟಿ 
ವಿದೇಶ

ಮ್ಯಾಥ್ಯೂ ಅಬ್ಬರ: ಹೈಟಿಯಲ್ಲಿ 800 ಸಾವು

ಮ್ಯಾಥ್ಯೂ ಚಂಡಮಾರುತದ ಅಬ್ಬರಕ್ಕೆ ಕೆರಿಬ್ಬಿಯನ್ ಬಡರಾಷ್ಟ್ರವಾಗಿರುವ ಹೈಟಿ ಅಕ್ಷರಶಃ ತತ್ತರಿಸಿದೆ. ಕೆಲ ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆ, ಚಂಡಮಾರುತ ಬೀಸುತ್ತಿದ್ದು...

ಹೈಟಿ: ಮ್ಯಾಥ್ಯೂ ಚಂಡಮಾರುತದ ಅಬ್ಬರಕ್ಕೆ ಕೆರಿಬ್ಬಿಯನ್ ಬಡರಾಷ್ಟ್ರವಾಗಿರುವ ಹೈಟಿ ಅಕ್ಷರಶಃ ತತ್ತರಿಸಿದೆ. ಕೆಲ ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆ, ಚಂಡಮಾರುತ ಬೀಸುತ್ತಿದ್ದು ಇದರಲ್ಲಿ ಕನಿಷ್ಠ 800ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಭಾರೀ ಮಳೆ ಹಾಗೂ ಗಾಳಿಯಿಂದಾಗಿ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಮ್ಯಾಥ್ಯೂ ರಭಸಕ್ಕೆ ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿವೆ. ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತೊಂಡು ಜನರು ಮತ್ತಷ್ಟು ತೊಂದರೆ ಎದುರಿಸುತ್ತಿದ್ದಾರೆ. ಅಪಾಯಕಾರಿ ಪ್ರದೇಶಗಳಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಲು ಅಮೆರಿಕ ವಿಪತ್ತು ನಿರ್ವಹಣಾ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಮ್ಯಾಥ್ಯೂ ಚಂಡಮಾರುತ ಹಿನ್ನಲೆಯಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಆಂತರಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಈ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಮರೋಪಾದಿ ರಕ್ಷಣಾ ಕಾರ್ಯಾಚರಣೆಗೆ ಆದೇಶಿಸಲಾಗಿದ್ದು, ಕಾರ್ಯಾಚರಣೆಯಲ್ಲಿ ಅಮೆರಿಕದ ನುರಿತ ಸೇನಾಪಡೆಗಳು ಕೂಡ ಕೈ ಜೋಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!