ಭಾರತದೊಂದಿಗೆ ಪೈಪೋಟಿ, ಬಾಂಗ್ಲಾದೇಶಕ್ಕೆ 24 ಬಿಲಿಯನ್ ಡಾಲರ್ ಸಾಲ ನೀಡಲಿರುವ ಚೀನಾ 
ವಿದೇಶ

ಭಾರತದೊಂದಿಗೆ ಪೈಪೋಟಿ, ಬಾಂಗ್ಲಾದೇಶಕ್ಕೆ 24 ಬಿಲಿಯನ್ ಡಾಲರ್ ಸಾಲ ನೀಡಲಿರುವ ಚೀನಾ

ಬಾಂಗ್ಲಾದೇಶದ ಮೇಲೆ ಭಾರತ ಹೊಂದಿರುವ ಪ್ರಭಾವವನ್ನು ತಗ್ಗಿಸಿ, ಭಾರತದ ನೆರೆ ರಾಷ್ಟ್ರವನ್ನು ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿರುವ ಚೀನಾ ಬಾಂಗ್ಲಾದೇಶಕ್ಕೆ 24 ಬಿಲಿಯನ್ ಡಾಲರ್ ಸಾಲ ನೀಡಲು ಸಿದ್ಧವಾಗಿದೆ.

ಢಾಕಾ: ಬಾಂಗ್ಲಾದೇಶದ ಮೇಲೆ ಭಾರತ ಹೊಂದಿರುವ ಪ್ರಭಾವವನ್ನು ತಗ್ಗಿಸಿ, ಭಾರತದ ನೆರೆ ರಾಷ್ಟ್ರವನ್ನು ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿರುವ ಚೀನಾ ಬಾಂಗ್ಲಾದೇಶಕ್ಕೆ 24 ಬಿಲಿಯನ್ ಡಾಲರ್ ಸಾಲ ನೀಡಲು ಸಿದ್ಧವಾಗಿದೆ.

ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಲು ಗೋವಾಗೆ ಆಗಮಿಸುತ್ತಿರುವ ಚೀನಾ ಅಧ್ಯಕ್ಷ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಮಾರ್ಗ ಮಧ್ಯದಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದು, 24 ಬಿಲಿಯನ್ ಡಾಲರ್ ಸಾಲ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

30 ವರ್ಷಗಳಲ್ಲಿ ಇದೆ ಮೊದಲ ಬಾರಿಗೆ ಚೀನಾ ಅಧ್ಯಕ್ಷರು ಬಾಂಗ್ಲಾದೇಶಕ್ಕೆ ಭೇಟಿ ನೀಡುತ್ತಿದ್ದು, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೂಲಸೌಕರ್ಯಅಭಿವೃದ್ಧಿ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಭಾರತಕ್ಕೆ ಪೈಪೋಟಿ ನೀಡಲು ಯತ್ನಿಸುತ್ತಿದೆ. ಭಾರತ ಈಗಾಗಲೇ ಬಾಂಗ್ಲಾದೇಶದಲ್ಲಿ ಹಲವು ಮೂಲಸೌಕರ್ಯ ಯೋಜನೆಗಳಲ್ಲಿ ಪಾಲುದಾರಿಕೆ ಹೊಂದಿದೆ. ಭಾರತದ ಪ್ರಭಾವದಿಂದ ಜಪಾನ್ ಸಹ ಬಾಂಗ್ಲಾದೇಶದಲ್ಲಿ ಹಲವು ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಭಾವವನ್ನು ಕಡಿಮೆ ಮಾಡಲು ಚೀನಾ ಬಾಂಗ್ಲಾದೇಶಕ್ಕೆ ಹೆಚ್ಚಿನ ಸಾಲ ನೀಡಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್