ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ: ಡೊನಾಲ್ಡ್ ಟ್ರಂಪ್

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದಿಂದ ಸ್ಪರ್ಧಿಸಿರುವ ಡೊನಾಲ್ಡ್ ಟ್ರಂಪ್, ತಾವು ಅಧ್ಯಕ್ಷರಾಗಿ ಆಯ್ಕೆಯಾದರೆ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಡೊನಾಲ್ಡ್ ಟ್ರಂಪ್
Srinivas Rao BV
Updated On : 18 Oct 2016, 2:47 am

ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದಿಂದ ಸ್ಪರ್ಧಿಸಿರುವ ಡೊನಾಲ್ಡ್ ಟ್ರಂಪ್, ತಾವು ಅಧ್ಯಕ್ಷರಾಗಿ ಆಯ್ಕೆಯಾದರೆ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಡಬ್ಲ್ಯೂಎನ್ ಡಿ ರೇಡಿಯೋ ಸ್ಟೇಷನ್ ಗೆ ಸಂದರ್ಶನ ನೀಡಿರುವ ಡೊನಾಲ್ಡ್ ಟ್ರಂಪ್, ನವೆಂಬರ್ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾದರೆ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.  
ಅಧ್ಯಕ್ಷರಾಗಿ ಆಯ್ಕೆಯಾದ ವ್ಯಕ್ತಿ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ವಿದೇಶದ ಅಧ್ಯಕ್ಷರು ಅಥವಾ ನಾಯಕರನ್ನು ಭೇಟಿ ಮಾಡಿದ ಉದಾಹರಣೆಗಳು ಈ ವರೆಗೆ ಇಲ್ಲ. ನವೆಂಬರ್ 2008 ರಲ್ಲಿ ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಬರಾಕ್ ಒಬಾಮ ವಿದೇಶಾಂಗ ವ್ಯವಹಾರಗಳಿಂದ ದೂರವೇ ಇದ್ದು ಏಕ ಕಾಲದಲ್ಲಿ ಇಬ್ಬರು ಅಧ್ಯಕ್ಷರು ವಿದೇಶಾಂಗ ವ್ಯವಹಾರಗಳಲ್ಲಿ ತೊಡಗುವುದು ಸೂಕ್ತವಲ್ಲ ಎಂಬ ಸಂದೇಶವನ್ನು ರವಾನಿಸಿದ್ದರು.

ಒಬಾಮ ಬಗ್ಗೆ ಪುಟಿನ್ ಗೆ ಒಳ್ಳೆಯ ಅಭಿಪ್ರಾಯವಿಲ್ಲ. ಆದರೆ ನಾನು ಅಧ್ಯಕ್ಷನಾಗಿ ಆಯ್ಕೆಯಾದರೆ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನವೇ ರಷ್ಯಾ ಅಧ್ಯಕ್ಷರನ್ನು ಭೇಟಿ ಮಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments