ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಮಂಗಳವಾರ ಪಾಕಿಸ್ತಾನ ಮುಸ್ಲಿಂ ಲೀಗ್-ಎನ್(ಪಿಎಂಎಲ್-ಎನ್) ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ.
ಆಡಳಿತರೂಢ ಪಕ್ಷ ಪಿಎಂಎಲ್-ಎನ್ ಅಧ್ಯಕ್ಷರ ಹುದ್ದೆಗೆ ನಡೆದ ಚುನಾವಣೆಯಲ್ಲಿ ಪಾಕ್ ಪ್ರಧಾನಿ ಅವಿರೋಧವಾಗಿ ಆಯ್ಕೆಯಾಗಿದ್ದು, ಅವರ ವಿರುದ್ಧ ಸ್ಪರ್ಧೆಗೆ ಮುಂದಾಗಿದ್ದ ಏಕೈಕ ಅಭ್ಯರ್ಥಿ ಸರ್ದಾರ್ ಪ್ರಿನ್ಸ್ ಬಲೋಚ್ ಅವರ ನಾಮಪತ್ರವನ್ನು ಮುಖ್ಯ ಚುನಾವಣಾ ಆಯುಕ್ತ ಚೌಧರಿ ಜಾಫರ್ ಇಖ್ಬಾಲ್ ಅವರು ತಿರಸ್ಕರಿಸಿದ್ದಾರೆ ಎಂದು ನ್ಯೂಸ್ ಇಂಟರ್ ನ್ಯಾಷನಲ್ ವರದಿ ಮಾಡಿದೆ.
ಪಿಎಂಎಲ್-ಎನ್ ಅಧ್ಯಕ್ಷರಾಗಿ ಷರೀಫ್ ಮರು ಆಯ್ಕೆಯನ್ನು ಖಂಡಿಸಿರುವ ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ಅವರು, ಖೈಬರ್ ಪಖ್ತುಂಖ್ವ ಜನ ನಯ ಪಾಕಿಸ್ತಾನ ಮಾಡುತ್ತೇನೆ ಎಂದು ಭರವಸೆ ನೀಡಿದ್ದ ತಮ್ಮ ಚುನಾಯಿತ ನಾಯಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಅವರಿಗೆ ಸಿಗುತ್ತಿರುವುದು ಬರೀ ಕಂಟೇನರ್ ಎಂದು ವಾಗ್ದಾಳಿ ನಡೆಸಿದ್ದಾರೆ.