ವಿದೇಶ

ಪಾಕ್ ನ ಲಷ್ಕರ್ ಉಗ್ರ ಸಂಘಟನೆಯನ್ನು ಸೇನಾ ಪಡೆ ಎಂದ ಚೀನಾ ಮಾಧ್ಯಮ!

Srinivas Rao BV

ಬೀಜಿಂಗ್: ಪಾಕ್ ಭಯೋತ್ಪಾದಕ ಸಂಘಟನೆ ಲಷ್ಕರ್-ಎ- ತೊಯ್ಬಾ ಉಗ್ರ ಸಂಘಟನೆಯನ್ನು ಚೀನಾದ ಮಾಧ್ಯಮ ಸೇನಾ ಪಡೆ ಎಂದು ಸಂಬೋಧಿಸಿದೆ.
ಭಾರತದಲ್ಲಿ ಚೀನಾ ಸರಕುಗಳ ಬಹಿಷ್ಕಾರ ವಿಷಯವನ್ನು ಪ್ರಧಾನವಾಗಿರಿಸಿಕೊಂಡು ಕಾರ್ಯಕ್ರಮವೊಂದನ್ನು ಪ್ರಸಾರ ಮಾಡಿದ್ದ ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮ ಗ್ಲೋಬಲ್ ಟೈಮ್ಸ್, ಪಾಕ್ ನ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯನ್ನು ಸೇನಾಪಡೆ ಎಂದು ಹೇಳಿದೆ.
ಈ ನಡುವೆಯೇ ಭಾರತ ಹಾಗೂ ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧದ ಮೇಲೆ ಗಡಿ ವಿವಾದ ಹಾಗೂ ಚೀನಾ ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಪರಿಣಾಮ ಬೀರುತ್ತಿದೆ. ಭಾರತ ಎನ್ ಎಸ್ ಜಿ ಸದಸ್ಯತ್ವ ಕೈತಪ್ಪಲು ಚೀನಾವನ್ನು ದೂಷಿಸುತಿದೆ. ಜೊತೆಗೆ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಮಿಲಿಟರಿ ಪಡೆ ಲಷ್ಕರ್-ಎ- ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥನಿಗೆ ನಿಷೇಧ ವಿಧಿಸುವ ಪ್ರಕ್ರಿಯೆಗೆ ಅಡ್ಡಗಾಲು ಹಾಕುತ್ತಿದೆ ಎಂಬ ಆರೋಪ ಮಾಡಿದೆ ಎಂದು ಚೀನಾ ಮಾಧ್ಯಮ ಹೇಳಿದೆ. ಇಷ್ಟೆಲ್ಲದರ ಹೊರತಾಗಿಯೂ ಭಾರತ ಚೀನಾದೊಂದಿಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮುನ್ನಡೆಯುವುದು ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂಬುದನ್ನು ಅರಿತಿದೆ ಎಂದು ಚೀನಾ ಮಾಧ್ಯಮ ಹೇಳಿದೆ.

SCROLL FOR NEXT