ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗರು ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಾಧ್ಯಮಗಳನ್ನು ಸುಳ್ಳುಗಾರರೆಂದು ಹೇಳಿದ್ದಾರೆ.
ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ವೇಳೆ ಈ ಘಟನೆ ನಡೆದಿದ್ದು, ಕಾರ್ಯಕ್ರಮ ವರದಿ ಮಾಡಲು ತೆರಳಿದ್ದ ಮಾಧ್ಯಮಗಳ ವಿರುದ್ಧ ಡೊನಾಲ್ಡ್ ಟ್ರಂಪ್ ಅಭಿಮಾನಿಯೊಬ್ಬ ಕೂಗಾಡಿದ್ದು, ಮಾಧ್ಯಮಗಳೊಂದಿಗೆ ನಾನು ಮಾತನಾಡುವುದಿಲ್ಲ, ನೀವು ಸುಳ್ಳುಗಾರರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮೆರಿಕದಲ್ಲಿ ಪೆನ್ಸಿಲ್ವೇನಿಯಾದಲ್ಲಿ 1988 ರಿಂದ ಮೊದಲ ಬಾರಿಗೆ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯೊಬ್ಬರಿಗೆ ಗೆಲುವು ದೊರೆತಿದೆ. ಚುನಾವಣಾ ಪ್ರಚಾರದ ಭಾಷಣದಲ್ಲಿ ಮಾತನಾಡಿದ್ದ ಡೊನಾಲ್ಡ್ ಟ್ರಂಪ್ ಮಾಧ್ಯಮಗಳು ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ನೊಂದಿಗೆ ಓಟ್ ರಿಗ್ಗಿಂಗ್ ನಲ್ಲಿ ಶಾಮೀಲಾಗಿವೆ. ನಾನು ಹಿಲರಿ ಕ್ಲಿಂಟನ್ ವಿರುದ್ಧ ಸ್ಪರ್ಧಿಸುತ್ತಿಲ್ಲ. ಬದಲಾಗಿ ಮೋಸಗಾರ ಮಾಧ್ಯಮಗಳ ವಿರುದ್ಧ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದರು.