ಅಮೆರಿಕ ಸರ್ಕಾರದ ವಕ್ತಾರ 
ವಿದೇಶ

ರಾಜತಾಂತ್ರಿಕ ವಿವಾದಗಳನ್ನು ಭಾರತ- ಪಾಕಿಸ್ತಾನವೇ ಬಗೆಹರಿಸಿಕೊಳ್ಳಬೇಕು: ಅಮೆರಿಕ

ಭಾರತ- ಪಾಕಿಸ್ತಾನದ ನಡುವಿನ ವಿವಾದಗಳನ್ನು ಆ ಎರಡು ರಾಷ್ಟ್ರಗಳೇ ಬಗೆಹರಿಸಿಕೊಳ್ಳಬೇಕು ಎಂದು ಅಮೆರಿಕ ಹೇಳಿದೆ.

ವಾಷಿಂಗ್ ಟನ್: ಪಾಕಿಸ್ತಾನ ದೂತವಾಸ ಅಧಿಕಾರಿ ವಿರುದ್ಧ ಪಾಕಿಸ್ತಾನದ ಪರ ಭಾರತದಲ್ಲಿ ಬೇಹುಗಾರಿಕೆ ನಡೆಸುವ ಆರೋಪ ಕೇಳಿಬಂದಿದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಅಮೆರಿಕ, ಭಾರತ- ಪಾಕಿಸ್ತಾನದ ನಡುವಿನ ವಿವಾದಗಳನ್ನು ಆ ಎರಡು ರಾಷ್ಟ್ರಗಳೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದೆ.

"ಉಭಯ ದೇಶಗಳು ರಾಯಭಾರಿ ಅಧಿಕಾರಿಗಳನ್ನು ವಾಪಸ್ ಹೋಗುವಂತೆ ಆದೇಶ ನೀಡಿರುವ ವರದಿಗಳನ್ನು ಗಮನಿಸಿದ್ದೇವೆ. ಇದು ರಾಜತಾಂತ್ರಿಕ ನಿರ್ಧಾರಗಳಾಗಿದ್ದು ಇವುಗಳನ್ನು ಭಾರತ ಹಾಗೂ ಪಾಕಿಸ್ತಾನವೇ ಬಗೆಹರಿಸಿಕೊಳ್ಳಬೇಕು ಎಂದು  ಅಮೆರಿಕ ಸರ್ಕಾರದ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆ. ಭಾರತದಲ್ಲಿ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ತಿಳಿಯಲು ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಡಿ ಭಾರತ ಪಾಕ್ ರಾಜತಾಂತ್ರಿಕ ಅಧಿಕಾರಿಯನ್ನು ವಜಾಗೊಳಿಸಿತ್ತು. ಇದಾದ ಬಳಿಕ ಪಾಕಿಸ್ತಾನವೂ ಅಲ್ಲಿನ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಪಾಕಿಸ್ತಾನವನ್ನು ತೊರೆಯುವಂತೆ ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ