Imran Khan 
ವಿದೇಶ

ಷರೀಫ್ ವಿರುದ್ಧ ಪ್ರತಿಭಟನೆ: ಇಮ್ರಾನ್ ಖಾನ್ ಸೇರಿ 40 ಕಾರ್ಯಕರ್ತರ ಬಂಧನ

ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ವಿರುದ್ಧ ರ್ಯಾಲಿ ನಡೆಸಿದ ಕಾರಣಕ್ಕೆ ಮಾಜಿ ಕ್ರಿಕೆಟಿಗ ಹಾಗೂ ತೆಹರೀಕ್ ಇ ಪಾಕಿಸ್ತಾನ್ ಪಕ್ಷದ ಅಧ್ಯಕ್ಷರಾಗಿರುವ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನ ಪೊಲೀಸರು ಗುರುವಾರ...

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ವಿರುದ್ಧ ರ್ಯಾಲಿ ನಡೆಸಿದ ಕಾರಣಕ್ಕೆ ಮಾಜಿ ಕ್ರಿಕೆಟಿಗ ಹಾಗೂ ತೆಹರೀಕ್ ಇ ಪಾಕಿಸ್ತಾನ್ ಪಕ್ಷದ ಅಧ್ಯಕ್ಷರಾಗಿರುವ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನ ಪೊಲೀಸರು ಗುರುವಾರ ರಾತ್ರಿ ಬಂಧನಕ್ಕೊಳಪಡಿಸಿದ್ದಾರೆ.

ನವಾಜ್ ಷರೀಫ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕೆಂದು ಆಗ್ರಹಿಸಿ ಕಳೆದ ರಾತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್ ನಲ್ಲಿ ಪ್ರತಿಭಟನಾ ಯುವ ರ್ಯಾಲಿಯೊಂದನ್ನು ನಡೆಸುತ್ತಿದ್ದರು.

ಇಸ್ಲಾಮಾಬಾದ್ ನಲ್ಲಿ ಈಗಾಗಲೇ ಪ್ರತಿಭಟನೆ ತೀವ್ರಗೊಂಡಿರುವುದರಿಂದ ಮುಂದಿನ 2 ತಿಂಗಳ ಕಾಲ ಸೆಕ್ಷನ್-144ನ್ನು ಜಾರಿ ಮಾಡಲಾಗಿತ್ತು. ಇದರಂತೆ ಸಾರ್ವಜನಿಕ ಕಾರ್ಯಕ್ರಮಗಳಿಗೂ ನಿಷೇಧ ಹೇರಲಾಗಿತ್ತು.

ಇದರ ನಡುವೆಯೂ ಇಮ್ರಾನ್ ಖಾನ್ ಅವರು ಕಾರ್ಯಕ್ರಮವನ್ನು ಆಯೋಜಿಸಿದ್ದರಿಂದ, ಕಾರ್ಯಕ್ರಮದ ಮೇಲೆ ದಾಳಿ ಮಾಡಿದ ಪಾಕಿಸ್ತಾನ ಪೊಲೀಸರು ಇಮ್ರಾನ್ ಖಾನ್ ಅವರನ್ನೂ ಸೇರಿ 40 ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಹೇಳಲಾಗುತ್ತಿದೆ.

ನವಾಜ್ ಶರೀಫ್ ಅವರ ಇಬ್ಬರು ಪುತ್ರರು ಹಾಗೂ ಪುತ್ರಿ ಬ್ರಿಟನ್ನಿನಲ್ಲಿ ಆಸ್ತಿ ಹೊಂದಿರುವುದು ಏಪ್ರಿಲ್ ತಿಂಗಳಿನಲ್ಲಿ ಬಹಿರಂಗವಾಗಿದ್ದ ಪನಾಮಾ ದಾಖಲೆಗಳಲ್ಲಿ ಬಯಲಾಗಿತ್ತು. ಶರೀಫ್ ಅವರು ತಮ್ಮ ಕುಟುಂಬದ ಆಸ್ತಿ ವಿವರದಲ್ಲಿ ಇದನ್ನು ಉಲ್ಲೇಖಿಸಿರಲಿಲ್ಲ.

ಪನಾಮಾ ದಾಖಲೆಗಳಲ್ಲಿ ಹೆಸರು ಬಹಿರಂಗವಾದ ಹಿನ್ನೆಲೆಯಲ್ಲಿ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಶರೀಫ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕೆಂದು ಪ್ರತಿಪಕ್ಷ ಪಾಕಿಸ್ತಾನ್ ತೆಹ್ರೀಕ್-ಐ-ಇನ್ಸಾಫ್ ಆಗ್ರಹಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT