ಅಮೆರಿಕನ್ ವಿಮಾನಕ್ಕೆ ಬೆಂಕಿ 
ವಿದೇಶ

ರನ್ ವೇಯಲ್ಲಿ ಧಗಧಗನೇ ಹೊತ್ತಿ ಉರಿದ ವಿಮಾನ: 169 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾ ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಚಿಕಾಗೋದ ಓಹಾರೆ ಏರ್‍ಪೋರ್ಟ್‍ನಲ್ಲಿ ಸಂಭವಿಸಿದೆ. 169 ...

ಚಿಕಾಗೋ: ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾ ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಚಿಕಾಗೋದ ಓಹಾರೆ ಏರ್‍ಪೋರ್ಟ್‍ನಲ್ಲಿ ಸಂಭವಿಸಿದೆ. 169 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರನ್ ವೇಯಲ್ಲಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಆತಂಕ ಮತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಮಿಯಾಮಿಗೆ ತೆರಳಬೇಕಿದ್ದ ಅಮೆರಿಕನ್ ಏರ್‍ಲೈನ್ಸ್‍ನ ಬೋಯಿಂಗ್ 767 ವಿಮಾನವು ಚಿಕಾಗೋ ವಿಮಾನನಿಲ್ದಾಣದಿಂದ ಮೇಲೇರಲು ರನ್‍ವೇಯಲ್ಲಿ ಹೋಗುತ್ತಿದ್ದಾಗ ಬೆಂಕಿ ತಗುಲಿತು. ತಕ್ಷಣ ಎಚ್ಚೆತ್ತ ಸಿಬ್ಬಂದಿ ತುರ್ತು ನಿರ್ಗಮನ ದ್ವಾರಗಳ ಮೂಲಕ ಪ್ರಯಾಣಿಕರ ಪಾರಾಗಲು ಸೂಚಿಸಿದರು. ಎಮರ್ಜೆನಿ ಸ್ಲೈಡ್ ಮೂಲ ಪ್ರಯಾಣಿಕರು ನಿರ್ಗಮಿಸುವ ಸಂದರ್ಭದಲ್ಲಿ ಕನಿಷ್ಠ 20 ಮಂದಿ ಪ್ರಯಾಣಿಕರಿಗೆ ತರಚು ಗಾಯಗಳು ಮತ್ತು ಮೂಳೆಗೆ ಪೆಟ್ಟಾಗಿವೆ. ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.  ಈ ವಿಮಾನದಲ್ಲಿ 161 ಪ್ರಯಾಣಿಕರು ಮತ್ತು ಒಂಭತ್ತು ಮಂದಿ ಸಿಬ್ಬಂದಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ