ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಗುಂಡು ಹಾರಿಸಿ ಶಾಲೆಗೆ ನುಗ್ಗಲು ಯತ್ನಿಸಿದ ಉಗ್ರರು

ಪೇಶಾವರ ಪೈಶಾಚಿಕ ಕೃತ್ಯದ ಬಳಿಕ ಮತ್ತೊಂದು ವಿಧ್ವಂಸಕ ಕೃತ್ಯವೊಂದು ಕ್ಷಣಾರ್ಧದಲ್ಲಿ ತಪ್ಪಿದಂತಾಗಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತು ತಂದಿದ್ದ ಉಗ್ರ ಗುಂಪೊಂದು ಖಾಸಗಿ ಶಾಲೆಯೊಂದರ ಮೇಲೆ ದಾಳಿ ಮಾಡಲು ಯತ್ನಿಸಿರುವುದಾಗಿ...

ಸಂಗ್ರಹ ಚಿತ್ರ
Manjula VN
Updated On : 31 Oct 2016, 12:39 pm

ಲಾಹೋರ್: ಪೇಶಾವರ ಪೈಶಾಚಿಕ ಕೃತ್ಯದ ಬಳಿಕ ಮತ್ತೊಂದು ವಿಧ್ವಂಸಕ ಕೃತ್ಯವೊಂದು ಕ್ಷಣಾರ್ಧದಲ್ಲಿ ತಪ್ಪಿದಂತಾಗಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತು ತಂದಿದ್ದ ಉಗ್ರ ಗುಂಪೊಂದು ಖಾಸಗಿ ಶಾಲೆಯೊಂದರ ಮೇಲೆ ದಾಳಿ ಮಾಡಲು ಯತ್ನಿಸಿರುವುದಾಗಿ ಸೋಮವಾರ ತಿಳಿದುಬಂದಿದೆ.

ಪಾಕಿಸ್ತಾನ ಪಂಜಾಬ್ ನ ಬಹವಾಲ್ನಗರದಲ್ಲಿರುವ ಖಾಸಗಿ ಶಾಲೆಯೊಂದರ ಬಳಿ ಬಂದಿರುವ ಇಬ್ಬರು ಉಗ್ರರು ಏಕಾಏಕಿ ಗುಂಡಿನ ದಾಳಿ ಮಾಡಲು ಆರಂಭಿಸಿದ್ದಾರೆ. ಅಲ್ಲದೆ, ಶಾಲೆಯೊಳಗೆ ನುಗ್ಗಲು ಯತ್ನಿಸಿದಾಗ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳು ತಡೆದಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಉಗ್ರರು ಕಾಲ್ಕಿತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಘಟನೆಯಲ್ಲಿ ಸಾವು-ನೋವುಗಳು ಸಂಭವಿಸಿಲ್ಲ, ಮಕ್ಕಳೆಲ್ಲರೂ ಸುರಕ್ಷಿತರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಕ್ಕಳನ್ನು ಮನೆಗಳಿಗೆ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement