ವಿದೇಶ

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯ ಪೇಶಾವರದಲ್ಲಿ ಗುಂಡಿನ ಚಕಮಕಿ: ಮೂವರು ಸಾವು

Sumana Upadhyaya
ಇಸ್ಲಾಮಾಬಾದ್: ಪಾಕಿಸ್ತಾನದ ಪೇಶಾವರ ನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಓರ್ವ ನಾಗರಿಕ ಮತ್ತು ಇಬ್ಬರು ಶಂಕಿತ ಉಗ್ರಗಾಮಿಗಳು ಹತರಾಗಿದ್ದಾರೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯಲ್ಲಿರುವ ಕ್ರಿಸ್ತಿಯನ್ ಕಾಲೊನಿ ಬಳಿ ಕಾನೂನು ಜಾರಿ ಸಿಬ್ಬಂದಿ ಮತ್ತು ಬಂದೂಕುಧಾರಿಗಳ ಮಧ್ಯೆ ಗುಂಡಿನ ಚಕಮಕಿ ಆರಂಭವಾಯಿತು ಎಂದು ಮೂಲಗಳಿಂದ ತಿಳಿದುಬಂದಿರುವುದಾಗಿ ಡಾನ್ ಆನ್ ಲೈನ್ ಪತ್ರಿಕೆ ವರದಿ ಮಾಡಿದೆ.
SCROLL FOR NEXT