ಸಿರಿಯಾ ಘರ್ಷಣೆಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಸೆ.21 ರಂದು ಯುಎನ್ ಉನ್ನತ ಮಟ್ಟದ ಸಭೆ
ಸಿರಿಯಾ ಘರ್ಷಣೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೆ.21 ಕ್ಕೆ ಉನ್ನತ ಮಟ್ಟದ ಸಭೆ ನಡೆಸಲಿದೆ.
ಯುನೈಟೆಡ್ ನೇಷನ್ಸ್: ಸಿರಿಯಾ ಘರ್ಷಣೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೆ.21 ಕ್ಕೆ ಉನ್ನತ ಮಟ್ಟದ ಸಭೆ ನಡೆಸಲಿದೆ.
ಸಿರಿಯಾದಲ್ಲಿ ಪ್ರಸ್ತುತ ನಡೆಯುತ್ತಿರುವ ಘರ್ಷಣೆಗೆ ರಾಜಕೀಯ ಪರಿಹಾರ ಕಂಡುಕೊಳ್ಳುವುದಕ್ಕೆ ಈ ಸಭೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ನ್ಯೂಜಿಲ್ಯಾಂಡ್ ನ ಪ್ರಧಾನಿ ಜಾನ್ ಕಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು ಸಿರಿಯಾದಲ್ಲಿ ಶಾಂತಿ ಸ್ಥಾಪನೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
ವಿಶ್ವಸಂಸ್ಥೆ ಮಹಾಸಭೆಯ ಸಂದರ್ಭದಲ್ಲಿ ಈ ಸಭೆ ಕೂಡ ನಡೆಯಲಿದ್ದು, ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ಉನ್ನತ ಮಟ್ಟದ ಸಭೆಯಲ್ಲಿ ಭದ್ರತೆ ಹಾಗು ಭಯೋತ್ಪಾದನೆ ನಿಗ್ರಹದ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.