ಡೊನಾಲ್ಡ್ ಟ್ರಂಪ್ 
ವಿದೇಶ

ಡೊನಾಲ್ಡ್ ಟ್ರಂಪ್ ನ್ನು ಸೋಲಿಸಲು ಫೇಸ್ ಬುಕ್ ಸಹ ಸಂಸ್ಥಾಪಕನಿಂದ 20 ಮಿಲಿಯನ್ ಡಾಲರ್ ದೇಣಿಗೆ

ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಲು ಫೇಸ್ ಬುಕ್ ನ ಸಹ ಸಂಸ್ಥಾಪಕ ಡಸ್ಟಿನ್ ಮೊಸ್ಕೊವಿಟ್ಜ್ ಪಣತೊಟ್ಟಿದ್ದಾರೆ.

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ದಿನಕಳೆದಂತೆ ತೀವ್ರ ಕುತೂಹಲ ಮೂಡಿಸುತ್ತಿದ್ದು, ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಲು ಫೇಸ್ ಬುಕ್ ನ ಸಹ ಸಂಸ್ಥಾಪಕ  ಡಸ್ಟಿನ್ ಮೊಸ್ಕೊವಿಟ್ಜ್ ಪಣತೊಟ್ಟಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಲೆಂದೇ 20 ಮಿಲಿಯನ್ ಡಾಲರ್ ನ್ನು ದೇಣಿಗೆ ನೀಡುವುದಾಗಿ  ಡಸ್ಟಿನ್ ಮೊಸ್ಕೊವಿಟ್ಜ್ ಬ್ಲಾಗ್ ಮೂಲಕ ಘೋಷಿಸಿದ್ದಾರೆ. ಅಮೆರಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಡೊನಾಲ್ಡ್ ಟ್ರಂಪ್ ಅವರ ಯೋಜನೆಗಳಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಡೆಸ್ಟಿನ್ ಮೊಸ್ಕೊವಿಟ್ಜ್ ಡೊನಾಲ್ಡ್ ಟ್ರಂಪ್ ಅವರೇನಾದರೂ ಅಮೆರಿಕ ಅಧ್ಯಕ್ಷರಾದರೆ ಜಾಗತಿಕ ಮಟ್ಟದಲ್ಲಿ ಅಮೆರಿಕ ಪ್ರತ್ಯೇಕಿಸಲ್ಪಡುತ್ತದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಕೇವಲ ತಮ್ಮ ಬ್ರಾಂಡ್ ನ್ನು ಹೆಚ್ಚಿಸಿಕೊಳ್ಳಲು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲಲು ಯತ್ನಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಚುನಾವಣೆ ಗೆದ್ದರೆ ಅಮೆರಿಕ- ಮೆಕ್ಸಿಕೋ ನಡುವೆ ಗೋಡೆ ನಿರ್ಮಾಣ ಮಾಡುವ ಮಾತುಗಳನ್ನಾಡಿದ್ದಾರೆ. ಆದರೆ ಇದರಿಂದ ಅಮೆರಿಕನ್ನರ ಮನಸ್ಸಿಗೆ ನೋವಾಗಲಿದೆ ಎಂದು ಡಸ್ಟಿನ್ ಮೊಸ್ಕೊವಿಟ್ಜ್ ಅಭಿಪ್ರಾಯಪಟ್ಟಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರಿಗಿಂತಲೂ ಹಿಲರಿ ಕ್ಲಿಂಟನ್ ಅಮೆರಿಕ ಅಧ್ಯಕ್ಷರಾಗಲು ಹೆಚ್ಚು ಅರ್ಹತೆ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇದೆ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದು ಡೊನಾಲ್ಡ್  ಟ್ರಂಪ್ ಅವರನ್ನು ಸೋಲಿಸಲು 20 ಮಿಲಿಯನ್ ಡಾಲರ್ ನ್ನು ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!