ಬಲೂಚಿಸ್ತಾನದಲ್ಲಿ ದೌರ್ಜನ್ಯ: ಪಾಕ್ ಸೇನೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಿರುವ ಬಿಆರ್ ಪಿ 
ವಿದೇಶ

ಬಲೂಚಿಸ್ತಾನದಲ್ಲಿ ದೌರ್ಜನ್ಯ: ಪಾಕ್ ಸೇನೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಿರುವ ಬಿಆರ್ ಪಿ

ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ ಹಾಗೂ ಐಎಸ್ಐ ನ ಇನ್ನಿತರ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲು ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷದ ಮುಖ್ಯಸ್ಥ ನಾಯಕ ಬ್ರಹಮ್‌ದಾಗ್ ಬುಗ್ತಿ ಹೇಳಿದ್ದಾರೆ.

ಜಿನೀವಾ: ಬಲೂಚಿಸ್ತಾನದಲ್ಲಿ ಪಾಕಿಸ್ತಾನ ನಡೆಸಿರುವ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ ಹಾಗೂ ಐಎಸ್ಐ ನ ಇನ್ನಿತರ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವುದಾಗಿ ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷದ ಮುಖ್ಯಸ್ಥ ನಾಯಕ ಬ್ರಹಮ್‌ದಾಗ್ ಬುಗ್ತಿ ಹೇಳಿದ್ದಾರೆ.

ಸೆ.18 ಹಾಗೂ 19 ರಂದು ಬಲೂಚಿಸ್ತಾನ ರಿಪಬ್ಲಿಕನ್ ಪಕ್ಷ(ಬಿಆರ್ ಪಿ)ದ ಕೇಂದ್ರೀಯ ಸಮಿತಿ ಸಭೆ ನಡೆಯಲಿದ್ದು, ಬಲೂಚಿಸ್ತಾನಕ್ಕೆ ಸಂಬಂಧಿಸಿದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗುತ್ತದೆ. ಇದೆ ಸಭೆಯಲ್ಲಿ ಬಲೂಚಿಸ್ತಾನದಲ್ಲಿ ನರಮೇಧ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್, ಪಾಕಿಸ್ತಾನದ ಸೇನಾ ಅಧಿಕಾರಿಗಳಾಗಿರುವ ಅಶ್ಫಾಕ್ ಪರ್ವೇಜ್ ಕಯಾನಿ ಸೇರಿದಂತೆ ಇನ್ನಿತರರ ವಿರುದ್ಧ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬಲೂಚಿಸ್ತಾನದಲ್ಲಿ ಹತ್ಯಾಕಾಂಡ ನಡೆಸಿರುವ ನಾಯಕರ ವಿರುದ್ಧ ಯುರೋಪಿಯನ್ ರಾಷ್ಟ್ರಗಳಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಬ್ರಹಮ್‌ದಾಗ್ ಬುಗ್ತಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!