ನವಾಜ್ ಷರೀಫ್ 
ವಿದೇಶ

ಮತ್ತೆ ಪಾಕ್ ಭಂಡತನ: ಯುಎನ್ ಜಿ ಎ ಸಭೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಲಿರುವ ನವಾಜ್ ಷರೀಫ್

ವಿಶ್ವಸಂಸ್ಥೆಯ 71 ನೇ ಮಹಾಸಭೆಗೆ ಪಾಕಿಸ್ತಾನ ನಿಯೋಗದೊಂದಿಗೆ ತೆರಳಿರುವ ಅಲ್ಲಿನ ಪ್ರಧಾನಿ ನವಾಜ್ ಷರೀಫ್, ಕಾಶ್ಮೀರ ವಿಷಯವನ್ನು ಕಾರ್ಯಸೂಚಿಯಾಗಿಟ್ಟುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನ್ಯೂಯಾರ್ಕ್:ವಿಶ್ವಸಂಸ್ಥೆಯ 71 ನೇ ಮಹಾಸಭೆಗೆ ಪಾಕಿಸ್ತಾನ ನಿಯೋಗದೊಂದಿಗೆ ತೆರಳಿರುವ ಅಲ್ಲಿನ ಪ್ರಧಾನಿ ನವಾಜ್ ಷರೀಫ್, ಕಾಶ್ಮೀರ ವಿಷಯವನ್ನು ಕಾರ್ಯಸೂಚಿಯಾಗಿಟ್ಟುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಾಶ್ಮೀರ ವಿಷಯ ಹಾಗೂ ಗಡಿ ಪ್ರದೇಶದಲ್ಲಿನ ಭಯೋತ್ಪಾದನೆ ವಿಷಯಗಳು ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಹದಗೆಡುತ್ತಿದ್ದರೂ, ಸಹ ಪಾಕ್ ಪ್ರಧಾನಿ ನವಾಜ್ ಷರೀಫ್ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವ ಸಿದ್ಧತೆ ನಡೆಸಿದ್ದಾರೆ. ಈ ಮೂಲಕ ಪಾಕಿಸ್ತಾನ ಮತ್ತೊಮ್ಮೆ ತನ್ನ ಭಂಡತನ ಪ್ರದರ್ಶಿಸಲು ಸಜ್ಜಾಗಿದೆ. ಭಾರತದ ಗಡಿ ಪ್ರದೇಶದಲ್ಲಿ ಶನಿವಾರ ನಡೆದಿರುವ ಉಗ್ರ ದಾಳಿಯ ಹಿಂದೆಯೂ ಪಾಕಿಸ್ತಾನದ ಕೈವಾಡವಿದೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.

ಪಾಕ್ ಪ್ರಧಾನಿಯ ವಿಶ್ವಸಂಸ್ಥೆ ಕಾರ್ಯಸೂಚಿಗಳ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ, ಸೆ.21 ರಿಂದ ನಡೆಯಲಿರುವ ವಿಶ್ವಸಂಸ್ಥೆಯ 71 ನೇ  ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನವಾಜ್ ಷರೀಫ್, ವಿಶೇಷವಾಗಿ ಜಮ್ಮು-ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.   
ಕಾಶ್ಮೀರ ಜನತೆಯ ಅಭಿಪ್ರಾಯ ಸಂಗ್ರಹಣೆ ಮಾಡುವಂತೆ ನವಾಜ್ ಷರೀಫ್ ಅಂತಾರಾಷ್ಟ್ರೀಯ ಸಮುದಾಯ ಹಾಗೂ ವಿಶ್ವಸಂಸ್ಥೆಗೆ ಮನವಿ ಮಾಡಲಿದ್ದಾರೆ ಎಂದು ಅಜೀಜ್ ಅಹ್ಮದ್ ಚೌಧರಿ ತಿಳಿಸಿದ್ದಾರೆ. ಇದೆ ವೇಳೆ ನವಾಜ್ ಷರೀಫ್ ಅಮೆರಿಕದ ವಿದೇಶಾಂಗ ಸಚಿವ ಜಾನ್ ಕೆರ್ರಿ ಅವರನ್ನೂ ಭೇಟಿ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!