ಬಲೂಚಿಸ್ತಾನದಲ್ಲೂ ಭಾರತೀಯ ಸೇನೆ ಸೀಮಿತ ದಾಳಿ ನಡೆಸಬೇಕು: ಬಲೂಚ್ ನಾಯಕ
ಪಾಕಿಸ್ತಾನ ಗಡಿಯಲ್ಲಿ ಉಗ್ರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದಂತೆಯೇ ಬಲೂಚಿಸ್ತಾನದಲ್ಲೂ ಭಾರತೀಯ ಸೇನೆ ಸೀಮಿತ ದಾಳಿ ನಡೆಸಬೇಕು ಎಂದು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ ದಿಲ್ಶಾದ್...
ನವದೆಹಲಿ: ಪಾಕಿಸ್ತಾನ ಗಡಿಯಲ್ಲಿ ಉಗ್ರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದಂತೆಯೇ ಬಲೂಚಿಸ್ತಾನದಲ್ಲೂ ಭಾರತೀಯ ಸೇನೆ ಸೀಮಿತ ದಾಳಿ ನಡೆಸಬೇಕು ಎಂದು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ ದಿಲ್ಶಾದ್ ಬಲೂಚ್ ಅವರು ಗುರುವಾರ ಹೇಳಿದ್ದಾರೆ.
ಪಾಕಿಸ್ತಾನದ ಉನ್ನತ ಆಯೋಗದ ಮುಂದೆ ಪ್ರತಿಭಟನೆಗಿಳಿದಿದ್ದ ಅವರು, ಉಗ್ರರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ನಡೆಸುತ್ತಿರುವ ಸೀಮಿತ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಭಯೋತ್ಪಾದನೆ ವಿರುದ್ಧ ಭಾರತ ತೆಗೆದುಕೊಳ್ಳುತ್ತಿರುವ ನಿರ್ಧಾರ ಸರಿಯಿದೆ. ಪಾಕಿಸ್ತಾನ ಗಡಿಯಲ್ಲಿ ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ನಡೆಸುತ್ತಿರುವ ಸೀಮಿತ ದಾಳಿಯನ್ನು ಬಲೂಚಿಸ್ತಾನದಲ್ಲೂ ನಡೆಸಬೇಕಿದೆ. ಭಯೋತ್ಪಾದನಾ ಚಟುವಟಿಕೆಗಳಿಂದ ಬಲೂಚಿಸ್ತಾನ ಸ್ವತಂತ್ರಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹಾಯ ಮಾಡಬೇಕು ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.