ಇಸ್ಲಮಾಬಾದ್: ಭಾರತೀಯ ಸೇನೆ ಬುಧವಾರ ತಡರಾತ್ರಿ ಪಾಕಿಸ್ತಾನ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಇಂಥಹ ಆಕ್ರಮಣಗಳಿಗೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂಬುದನ್ನು ಪಾಕಿಸ್ತಾನ ಪ್ರಧಾನ ಮಂತ್ರಿ ನವಾಜ್ ಷರೀಫ್ ಗೆ ನಾನು ತೋರಿಸುತ್ತೇನೆ ಎಂದು ಪಾಕಿಸ್ತಾನ ವಿರೋಧ ಪಕ್ಷ ನಾಯಕ ಇಮ್ರಾನ್ ಖಾನ್ ಹೇಳಿದ್ದಾರೆ.
ಇಂದು ನವಾಜ್ ಷರೀಫ್ ಗೆ ನಾನು ಸಂದೇಶ ನೀಡಿದ್ದಾನೆ.ನಾಳೆ ಭಾರತ ಪ್ರಧಾನಿ ನರೇಂದ್ರ ಮೋದಿಗೂ ಕೂಡ ಸಂದೇಶ ಕಳುಹಿಸುತ್ತೇನೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಪಾಕಿಸ್ತಾನದ ಎಲ್ಲಾ ಜನರು ಮಾರ್ಚ್ ನಲ್ಲಿ ಪಾಲ್ಗೊಂಡು ದೇಶದ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಆಗ್ರಹಿಸಿರುವ ಅವರು ಭಾರತದ ಆಕ್ರಮಣಕ್ಕೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂಬುದನ್ನು ನಾನು ಪ್ರಧಾನಿ ನವಾಜ್ ಷರೀಫ್ ಅವರಿಗೆ ತೋರಿಸಿಕೊಡುತ್ತೇನೆ ಎಂದಿದ್ದಾರೆ.
ಪಾಕಿಸ್ತಾನ ಸೇನಾ ಮುಖ್ಯಸ್ಥ ಜ. ರಾಹೀಲ್ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ, ಆದರೆ ಸರ್ಕಾರ ನಡೆಸಲು ಶರೀಫ್ ಅಸಮರ್ಥರಾಗಿದ್ದಾರೆ ಎಂದು ಆರೋಪಿಸಿದ್ದಾರೆ.