ಚೀನಾ ದೇಶದ ರಾಷ್ಟ್ರಧ್ವಜ 
ವಿದೇಶ

ಭಾರತ, ಪಾಕಿಸ್ತಾನ ಮಾತುಕತೆ ಮೂಲಕ ವಿವಾದ ಬಗೆಹರಿಸುವ ಭರವಸೆಯಿದೆ: ಚೀನಾ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿಗಳ ಲಾಂಚ್ ಪಾಡ್ ಮೇಲೆ ಭಾರತ ನಡೆಸಿರುವ ಸರ್ಜಿಕಲ್ ಸ್ಟ್ರೈಕ್...

ಬೀಜಿಂಗ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿಗಳ ಲಾಂಚ್ ಪಾಡ್ ಮೇಲೆ ಭಾರತ ನಡೆಸಿರುವ ಸರ್ಜಿಕಲ್ ಸ್ಟ್ರೈಕ್ ಗೆ ಪ್ರತಿಕ್ರಿಯೆ ನೀಡಿರುವ ಚೀನಾ, ಎರಡೂ ಸರ್ಕಾರಗಳ ಜೊತೆ ಸಂಪರ್ಕದಲ್ಲಿರುವುದಾಗಿ ಹೇಳಿದೆ. 
ದಾಳಿ ಕುರಿತು ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಸಚಿವಾಲಯ ವಕ್ತಾರ, ಭಾರತ ಮತ್ತು ಪಾಕಿಸ್ತಾನ ದೇಶಗಳು ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿ ಶಾಂತಿ ಮತ್ತು ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಪ್ರಯತ್ನಿಸಲಿವೆ ಎಂದು ಭರವಸೆಯಿಟ್ಟಿದ್ದೇವೆ ಎಂದು ಹೇಳಿದ್ದಾರೆ.
ಚೀನಾ ಎರಡೂ ರಾಷ್ಟ್ರಗಳಿಗೂ ಸ್ನೇಹಯುತ ನೆರೆ ರಾಷ್ಟ್ರವಾಗಿದೆ ಎಂದಿದೆ.
ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ವಕ್ತಾರರು, ಕಾಶ್ಮೀರ ವಿವಾದದ ಬೆಳವಣಿಗೆಗಳನ್ನು ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಕುರಿತು ಪಾಕಿಸ್ತಾನದ ನಿಲುವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಕಾಶ್ಮೀರ ವಿವಾದವನ್ನು ಮಾತುಕತೆ ಮತ್ತು ಸಲಹೆಗಳ ಮೂಲಕ ಸ್ಥಳೀಯ ಪಕ್ಷಗಳೇ ಬಗೆಹರಿಸಿಕೊಳ್ಳಬಹುದು ಎಂದು ಚೀನಾ ನಂಬಿದೆ ಎಂದು ವಕ್ತಾರರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!