ಚೀನಾದಲ್ಲಿ ಮೆಗಿ ಸೈಕ್ಲೋನ್ ಎಫೆಕ್ಟ್ (ಸಂಗ್ರಹ ಚಿತ್ರ) 
ವಿದೇಶ

ಚೀನಾದಲ್ಲಿ ಭೂ ಕುಸಿತ; 6ಕ್ಕೇರಿದ ಸಾವಿನ ಸಂಖ್ಯೆ, 23 ಮಂದಿ ನಾಪತ್ತೆ

ಚೀನಾದಲ್ಲಿ ಭೂಕುಸಿತ ಉಂಟಾದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 8ಕ್ಕೇರಿದೆ. ಅಂತೆಯೇ 23 ಮಂದಿ ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಬೀಜಿಂಗ್: ಮೆಗಿ ಸೈಕ್ಲೋನ್ ಪರಿಣಾಮ ಕಳೆದೊಂದು ವಾರದಿಂದ ಚೀನಾದಲ್ಲಿ ಭಾರಿ ಮಳೆಯಾಗುತ್ತಿದ್ದು, ಆಗ್ನೇಯ ಚೀನಾದಲ್ಲಿ ಭೂಕುಸಿತ ಉಂಟಾದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದೆ. ಅಂತೆಯೇ 23 ಮಂದಿ ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಚೀನಾದ ಜೆಜಿಯಾಂಗ್, ದಕ್ಷಿಣ ಶಾಂಘೈನಗರಗಳಲ್ಲಿ ಭೂ ಕುಸಿತ ಉಂಟಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಸಮರೋಪಾದಿಯಲ್ಲಿ ರಕ್ಷಣಾ  ಕಾರ್ಯಾಚರಣೆ ಸಾಗಿದ್ದು, ಕಾರ್ಯಾಚರಣೆಯಲ್ಲಿ ಚೀನಾ ಸೇನೆಯ ಶ್ವಾನದಳವನ್ನು (ಸ್ನಿಫರ್ ಡಾಗ್) ಬಳಸಿಕೊಳ್ಳಲಾಗುತ್ತಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವ ಮೃತದೇಹಗಳ ಹಾಗೂ  ಸಾವು-ನೋವಿನ ನಡುವೆ ಸಿಲುಕಿರುವವರ ರಕ್ಷಣೆಯಲ್ಲಿ ನಾಯಿಗಳು ಮಹತ್ತರ ಪಾತ್ರವಹಿಸುತ್ತಿವೆ ಎಂದು ಹೇಳಲಾಗುತ್ತಿದೆ.

ಇನ್ನು ಸುಕುನ್ ಪ್ರಾಂತ್ಯದಲ್ಲಿ 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಆಗ್ನೇಯ ಚೀನಾದಲ್ಲಿ ಉಂಟಾಗಿರುವ ಪ್ರವಾಹ ಕ್ರಮೇಣ  ಹೆಚ್ಚಾಗುತ್ತಿದ್ದು, ನೀರಿನ ವೇಗಕ್ಕೆ ಸಮೀಪದ ಕಟ್ಟಡಗಳೆಲ್ಲವೂ ಕೊಚ್ಚಿಕೊಂಡು ಹೋಗುತ್ತಿವೆ.

ಒಟ್ಟಾರೆ ಮೆಗಿ ಸೈಕ್ಲೋನ್ ಗೆ ಚೀನಾ ನಲುಗಿ ಹೋಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ