ಮಾಸ್ಕೋ: ರಷ್ಯಾದಲ್ಲಿ ಉಗ್ರರು ಬಾಂಬ್ ಸ್ಫೋಟ ನಡೆಸಿದ್ದು ಕನಿಷ್ಠ 10 ಮಂದಿ ಮೃತಪಟ್ಟಿದ್ದು 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಸೇಂಟ್ ಪೀಟರ್ಸ್ ಬರ್ಗ್ ನ ಸನಾಯಾ ಮೆಟ್ರೋ ನಿಲ್ದಾಣ ಸೇರಿ ಎರಡು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಐಇಡಿ ಬಳಸಿ ಸ್ಫೋಟ ನಡೆಸಲಾಗಿದೆ. ಘಟನೆಯಲ್ಲಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ 20 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಇತ್ತೀಚಿನ ವರದಿ ಮೂಲಕ ತಿಳಿದುಬಂದಿದೆ.
ಬಾಂಬ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ 8 ಮೆಟ್ರೋ ನಿಲ್ದಾಣಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಲಾಗಿದೆ. ಭದ್ರತಾ ಸಿಬ್ಬಂದಿಗಳು, ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಬಾಂಬ್ ಸ್ಫೋಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ.