ಈಜಿಪ್ಟ್ ನ ಚರ್ಚ್ ಮೇಲೆ ಭೀಕರ ಉಗ್ರ ದಾಳಿ; ಕನಿಷ್ಟ 13 ಸಾವು, 40ಕ್ಕೂ ಅಧಿಕ ಮಂದಿಗೆ ಗಾಯ
ಈಜಿಪ್ಟ್ ನ ನೈಲ್ ಡೆಲ್ಟಾದ ಚರ್ಚ್ ಮೇಲೆ ಉಗ್ರರು ನಡೆಸಿದ ಭೀಕರ ಬಾಂಬ್ ದಾಳಿಯಿಂದಾಗಿ ಕನಿಷ್ಟ 13 ಮಂದಿ ಸಾವಿಗೀಡಾಗಿ 42ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೈರೋ: ಈಜಿಪ್ಟ್ ನ ನೈಲ್ ಡೆಲ್ಟಾದ ಚರ್ಚ್ ಮೇಲೆ ಉಗ್ರರು ನಡೆಸಿದ ಭೀಕರ ಬಾಂಬ್ ದಾಳಿಯಿಂದಾಗಿ ಕನಿಷ್ಟ 13 ಮಂದಿ ಸಾವಿಗೀಡಾಗಿ 42ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈಜಿಪ್ಟ್ ನ ಟಂಟಾ ನಗರದ ನೈಲ್ ಡೆಲ್ಟಾದ ಚರ್ಚ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆ ಹೊತ್ತಿಲ್ಲವಾದರೂ, ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಉಗ್ರರೇ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಪ್ರಸ್ತುತ ಈಜಿಪ್ಟ್ ಪೊಲೀಸರು ಶಂಕಿತ ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ. ಪ್ರಸಕ್ತ ವರ್ಷ ಕ್ರಿಶ್ಚಿಯನ್ ಅಲ್ಪ ಸಂಖ್ಯಾತರ ಮೇಲೆ ಈಜಿಪ್ಟ್ ನಲ್ಲಿ ನಡೆಯುತ್ತಿರುವ ಮೊದಲ ದಾಳಿ ಇದಾಗಿದೆ ಎಂದು ಹೇಳಲಾಗುತ್ತಿದೆ.
ಕಳೆದ ಡಿಸೆಂಬರ್ ನಲ್ಲಿ ಈಜಿಪ್ಟ್ ರಾಜಧಾನಿ ಕೈರೋದ ಕಾಪ್ಟಿಕ್ ಕ್ಯಾಥೆಡ್ರಿಲ್ ನಲ್ಲಿ ನಡೆದ ಭೀಕರ ಬಾಂಬ್ ದಾಳಿಯಲ್ಲಿ 25 ಮಂದಿ ಸಾವನ್ನಪ್ಪಿ 49ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಹಲವು ಮಕ್ಕಳು ಮಹಿಳೆಯರು ಸಾವನ್ನಪ್ಪಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.