ಮಾಸ್ಕೋ: ಸಿರಿಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಲು ಅಮೆರಿಕಾ-ರಷ್ಯಾ ಜಂಟಿ ಕಾರ್ಯಾಚರಣೆ ನಡೆಸಲು ಒಪ್ಪಿಗೆ ಸೂಚಿಸಿವೆ.
ಅಮೆರಿಕಾ ವಿದೇಶಾಂಗ ಸಚಿವ ರೆಕ್ಸ್ ಟಿಲ್ಲರ್ ಸನ್ ರಷ್ಯಾದ ವಿದೇಶಾಂಗ ಸಚಿವ ಸೆರ್ಗಾಯೈ ಲಾವ್‌ರೋವ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ರಷ್ಯಾ ವಿದೇಶಾಂಗ ಸಚಿವ ಸೆರ್ಗಾಯೈ ಲಾವ್‌ರೋವ್, ದ್ವಿಪಕ್ಷೀಯ ಮಾತುಕತೆ ಫಲಪ್ರದವಾಗಿದ್ದು ಮುಂದಿನ ಜಂಟಿ ಕಾರ್ಯಾಚರಣೆಗಳಿಗೆ ಪೂರಕವಾಗಿ ನಡೆದಿದೆ ಎಂದಿದ್ದಾರೆ.
"ರಷ್ಯಾ-ಅಮೆರಿಕಾ ದ್ವಿಪಕ್ಷೀಯ ಸಂಬಂಧಕ್ಕೆ ಹಾಗೂ ಅಂತಾರಾಷ್ಟ್ರೀಯ ವಿದ್ಯಮಾನಗಳಿಗೆ ಮುಖ್ಯವಾದ ಅಂಶಗಳ ಬಗ್ಗೆ ಸಮಗ್ರ ಮತುಕತೆ ನಡೆಸಿವೆ ಮತ್ತು ಸಿರಿಯಾ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಜಂಟಿ ಕಾರ್ಯಾಚರಣೆ ನಡೆಸುವುದಕ್ಕೂ ತೀರ್ಮಾನಿಸಲಾಗಿದೆ ಎಂದು ರಷ್ಯಾ ವಿದೇಶಾಂಗ ಸಚಿವರು ಹೇಳಿದ್ದಾರೆ.