ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಬಗ್ಗೆ ಪ್ರಶ್ನೆಗೆ ಉತ್ತರಿಸದೇ ಜಾರಿಕೊಂಡ ವಿಶ್ವಸಂಸ್ಥೆ
ಪಾಕಿಸ್ತಾನ ಕುಲಭೂಷಣ್ ಜಾಧವ್ ಗೆ ಗಲ್ಲು ವಿಧಿಸಿರುವುದರ ಬಗ್ಗೆ ಉತ್ತರಿಸಲು ನಿರಾಕರಿಸಿರುವ ವಿಶ್ವಸಂಸ್ಥೆ, ಪ್ರಕರಣದ ಬಗ್ಗೆ ನಿರ್ಧರಿಸುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದೆ.
ವಿಶ್ವಸಂಸ್ಥೆ: ಪಾಕಿಸ್ತಾನ ಕುಲಭೂಷಣ್ ಜಾಧವ್ ಗೆ ಗಲ್ಲು ವಿಧಿಸಿರುವುದರ ಬಗ್ಗೆ ಉತ್ತರಿಸಲು ನಿರಾಕರಿಸಿರುವ ವಿಶ್ವಸಂಸ್ಥೆ, ಪ್ರಕರಣದ ಬಗ್ಗೆ ನಿರ್ಧರಿಸುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದೆ.
ಪ್ರಕರಣದ ಬಗ್ಗೆ ಸ್ಪಷ್ಟ ನಿರ್ಣಯ ಕೈಗೊಳ್ಳುವ ಸ್ಥಿತಿಯಲ್ಲಿ ನಾವು ಇಲ್ಲ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯ ವಕ್ತಾರರು ಹೇಳಿರುವುದನ್ನು ಡಾನ್ ಪತ್ರಿಕೆ ವರದಿ ಮಾಡಿದೆ. ಒಟ್ಟಾರೆಯಾಗಿ ಭಾರತ-ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧ ಸುಧಾರಿಸಬೇಕು ಹಾಗೂ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂಬುದು ವಿಶ್ವಸಂಸ್ಥೆಯ ನಿಲುವಾಗಿದೆ ಎಂದಷ್ಟೇ ತಿಳಿಸಿದೆ.
ಕುಲಭೂಷಣ್ ಜಾಧವ್ ಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆಯನ್ನು ತಕ್ಷಣವೇ ಜಾರಿಗೆ ತರಲಾಗುವುದಿಲ್ಲ ಎಂದು ಪಾಕಿಸ್ತಾನ ರಕ್ಶಣಾ ಸಚಿವ ಖವಾಜ ಮೊಹಮ್ಮದ್ ಆಸೀಫ್ ಹೇಳಿದ್ದರು. ಭಾರತವೂ ಸಹ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನೆ ಮಾಡಿದ್ದು, ಅಮೆರಿಕಾ ಸಹ ಕುಲಭೂಷಣ್ ಜಾಧವ್ ಗೆ ಗಲ್ಲು ಶಿಕ್ಷೆ ಪ್ರಕಟಿಸಿರುವುದನ್ನು ಪ್ರಶ್ನಿಸಿದ್ದರೆ ವಿಶ್ವಸಂಸ್ಥೆ ಮಾತ್ರ ಈ ಬಗ್ಗೆ ಉತ್ತರಿಸಲು ನಿರಾಕರಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.