ಸಿರಿಯಾ: ಆತ್ಮಾಹುತಿ ಕಾರ್ ಬಾಂಬ್ ದಾಳಿಗೆ 100 ಸಾವು
ಸಿರಿಯಾ ನಿರಾಶ್ರಿತರಿದ್ದ 2 ಬಸ್ ಗಳನ್ನು ಗುರಿಯಾಗಿರಿಸಿಕೊಂಡು ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ 100 ಮಂದಿ ಅಸುನೀಗಿದ್ದಾರೆ...
ರಶಿದಿನ್(ಸಿರಿಯಾ): ಸಿರಿಯಾ ನಿರಾಶ್ರಿತರಿದ್ದ 2 ಬಸ್ ಗಳನ್ನು ಗುರಿಯಾಗಿರಿಸಿಕೊಂಡು ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ 100 ಮಂದಿ ಅಸುನೀಗಿದ್ದಾರೆ.
ಸಿರಿಯಾ ಸರ್ಕಾರಿ ಪಡೆಗಳ ನಿಯಂತ್ರಣದಲ್ಲಿರುವ ಅಲೆಪ್ಪೋದ ಉಪನಗರ ರಶಿದಿನ್ ನಲ್ಲಿ ಈ ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದ್ದು ಅಧಿಕೃತ ಸಾವಿನ ಸಂಖ್ಯೆ 43 ಎಂದು ಹೇಳಲಾಗಿದ್ದರೂ ನಾಗರಿಕರ ರಕ್ಷಣಾ ಗುಂಪು ವೈಟ್ ಹೆಲ್ಮೆಟ್ ಎಂಬ ಸಂಘಟನೆ ನೀಡಿದ ಮಾಹಿತಿ ಪ್ರಕಾರ ಕನಿಷ್ಠ 100 ಮಂದಿ ಅಸುನೀಗಿದ್ದಾರೆ. ಇನ್ನು ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನು ರಕ್ಕಾದಲ್ಲಿ ಅಮೆರಿಕ ಮೈತ್ರಿ ಪಟೆಗಳು ಇಸ್ಲಾಮಿಕ್ ಸ್ಟೇಟ್ ವಿರುದ್ಧ ಮುನ್ನುಗ್ಗಿ ತೆರಳುತ್ತಿರುವಂತೆಯೇ ಈ ಘಟನೆ ನಡೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.