ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಪಾಕಿಸ್ತಾನ ಪಂಜಾಬ್ ಪ್ರಾಂತ್ಯದಲ್ಲಿ 8 ಉಗ್ರರ ಹತ್ಯೆ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 8 ಉಗ್ರರನ್ನು ಹತ್ಯೆ ಮಾಡಿರುವುದಾಗಿ ಪಾಕಿಸ್ತಾನ ಸೇನಾ ಪಡೆ ಗುರುವಾರ ಹೇಳಿಕೊಂಡಿದೆ...

ಪಾಕಿಸ್ತಾನ ಸೇನಾ ಪಡೆ (ಸಂಗ್ರಹ ಚಿತ್ರ)
Manjula VN
Updated On : 20 Apr 2017, 10:48 am
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 8 ಉಗ್ರರನ್ನು ಹತ್ಯೆ ಮಾಡಿರುವುದಾಗಿ ಪಾಕಿಸ್ತಾನ ಸೇನಾ ಪಡೆ ಗುರುವಾರ ಹೇಳಿಕೊಂಡಿದೆ. 
ಶೈಖುಪುರದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಗುಪ್ತಚರ ಇಲಾಖೆಯ ಮಾಹಿತಿ ಆಧಾರದ ಮೇರೆಗೆ ಸೇನಾ ಪಡೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ನಡೆಸಲಾದ ಎನ್ ಕೌಂಟರ್ ನಲ್ಲಿ 8 ಉಗ್ರರನ್ನುಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆವೇಳೆ ಇಬ್ಬರು ಪೊಲೀಸರಿಗೆ ಗಾಯವಾಗಿದೆ ಎಂದು ಪಾಕಿಸ್ತಾನ ಅಧಿಕಾರಿಗಳು ಹೇಳಿದ್ದಾರೆ. 
ಸಿಟಿಡಿ ಪಡೆ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಕಾರ್ಯಾಚರಣೆ ವೇಳೆ ಶರಣಾಗುವಂತೆ ಉಗ್ರರಿಗೆ ಎಚ್ಚರಿಕೆ ನೀಡಲಾಗಿತ್ತು. ಎಚ್ಚರಿಕೆ ನೀಡಿದ ಬಳಿಕವೂ ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 8 ಉಗ್ರರನ್ನು ಹತ್ಯೆ ಮಾಡಲಾಯಿತು. ಕಾರ್ಯಾಚರಣೆ ವೇಳೆ 3-4 ಉಗ್ರರು ತಪ್ಪಿಸಿಕೊಂಡಿದ್ದಾರೆ. ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯಸ್ಥಿತಿ ಸುಧಾರಿಸಿದೆ ಎಂದು ಹೇಳಿದ್ದಾರೆ. 

Advertisement

Advertisement

ಎನ್ ಕೌಂಟರ್ ನಲ್ಲಿ ಹತ್ಯೆಯಾದ ಉಗ್ರರು ಜಮತ್-ಉಲ್-ಅಹ್ರಾರ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಹತ್ಯೆಯಾದ ಉಗ್ರರ ಬಳಿಯಿದ್ದ 3 ಕೆಜಿ ಸ್ಫೋಟಕಗಳು, 2 ರೈಫಲ್, ಪಿಸ್ತೂಲ್ ಮತ್ತು ಆತ್ಮಹತ್ಯಾ ಚುಚ್ಚುಮದ್ದುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement