ಸಿರಿಯಾದ ರಕ್ಕಾದಲ್ಲಿ ಅಮೆರಿಕ ಸೇನೆ ವೈಮಾನಿಕ ದಾಳಿ: 43 ನಾಗರಿಕರ ಸಾವು
ಅಮೆರಿಕ ಸೇನೆ ಸಿರಿಯಾದ ರಕ್ಕಾದಲ್ಲಿ ವೈಮಾನಿಕ ದಾಳಿ ನಡೆಸಿದ್ದು ಪರಿಣಾಮ 43 ನಾಗರೀಕರು ಸಾವನ್ನಪ್ಪಿರುವುದಾಗಿ ಎಂದು ವರದಿಯಾಗಿದೆ...
ಡಮಾಸ್ಕಸ್: ಅಮೆರಿಕ ಸೇನೆ ಸಿರಿಯಾದ ರಕ್ಕಾದಲ್ಲಿ ವೈಮಾನಿಕ ದಾಳಿ ನಡೆಸಿದ್ದು ಪರಿಣಾಮ 43 ನಾಗರೀಕರು ಸಾವನ್ನಪ್ಪಿರುವುದಾಗಿ ಎಂದು ವರದಿಯಾಗಿದೆ.
ರಕ್ಕದಾ ಜನವಸತಿ ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಅಮೆರಿಕ ಸೇನೆ ವೈಮಾನಿಕ ದಾಳಿ ನಡೆಸಿದ್ದರಿಂದ ಹಲವರು ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಕ್ಸಿನ್ಹು ವರದಿ ಮಾಡಿದೆ.
ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ನಿರ್ಮೂಲನೆಗಾಗಿ ಅಮೆರಿಕ ಸೇನೆ 2014ರಿಂದ ವೈಮಾನಿಕ ದಾಳಿಗಳನ್ನು ನಡೆಸುತ್ತಿದೆ. ಆದರೆ ಅಮೆರಿಕ ದಾಳಿಯಿಂದಾಗಿ ಸಾಮಾನ್ಯ ಜನರು ಬಲಿಯಾಗುತ್ತಿದ್ದಾರೆ ಎಂದು ಸಿರಿಯಾ ವಿದೇಶಾಂಗ ಸಚಿವಾಲಯವು ವಿಶ್ವಸಂಸ್ಥೆಗೆ ಮನವಿ ಮಾಡಿ ಅಮೆರಿಕ ನೇತೃತ್ವದ ವೈಮಾನಿಕ ದಾಳಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.