ಸಂಗ್ರಹ ಚಿತ್ರ 
ವಿದೇಶ

ಡೊಕ್ಲಾಮ್ ವಿವಾದ: "ಮಾತುಕತೆ ಮೂಲಕ ಮಾತ್ರ ಚೀನಾ ಸಮಸ್ಯೆ ಬಗೆಹರಿಸಿಕೊಳ್ಳಬೇಕು", ಭಾರತಕ್ಕೆ ಅಮೆರಿಕ ಬೆಂಬಲ

ಭಾರತ ಮತ್ತು ಚೀನಾ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಡೊಕ್ಲಾಂ ಗಡಿ ವಿವಾದ ಸಂಬಂಧ ಭಾರತದ ಬೆಂಬಲಕ್ಕೆ ನಿಂತಿರುವ ದೊಡ್ಡಣ್ಣ ಅಮೆರಿಕ ಚೀನಾ ಮಾತುಕತೆ ಮೂಲಕ ಮಾತ್ರವೇ ಸಮಸ್ಯೆ ಬಗಹೆರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.

ವಾಷಿಂಗ್ಟನ್: ಭಾರತ ಮತ್ತು ಚೀನಾ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಡೊಕ್ಲಾಂ ಗಡಿ ವಿವಾದ ಸಂಬಂಧ ಭಾರತದ ಬೆಂಬಲಕ್ಕೆ ನಿಂತಿರುವ ದೊಡ್ಡಣ್ಣ ಅಮೆರಿಕ ಚೀನಾ ಮಾತುಕತೆ ಮೂಲಕ ಮಾತ್ರವೇ ಸಮಸ್ಯೆ ಬಗಹೆರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಅಮೆರಿಕ ವಿದೇಶಾಂಗ ಇಲಾಖೆ ವಕ್ತಾರ ಹೀದರ್ ನೌರ್ಟ್ ಅವರು, ಭಾರತ ಮತ್ತು ಚೀನಾ ದೇಶಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅಮೆರಿಕ ಭಾರತ ಮತ್ತು ಚೀನಾ ಎರಡೂ ದೇಶಗಳೊಂದಿಗೂ ವಾಣಿಜ್ಯ ಮತ್ತು ಸೌಹಾರ್ಧ ಸಂಬಂಧ ಹೊಂದಿದೆ. ಮುಖ್ಯವಾಗಿ ಚೀನಾ ಮಾತುಕತೆ ಮೂಲಕವೇ ಭಾರತದೊಂದಿಗಿನ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದರಿಂದ ಗಡಿಯಲ್ಲಿ ಶಾಂತಿ ಸ್ಥಾಪನೆಯಾಗಬೇಕು ಎಂದು ಹೇಳಿದ್ದಾರೆ.

ಈ ಹಿಂದಷ್ಟೇ ಚೀನಾ ತನ್ನ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಕುರಿತು ನಕಾರಾ ವ್ಯಕ್ತಪಡಿಸಿತ್ತು. ತನ್ನ ಸೈನಿಕರನ್ನು ಹಿಂದಕ್ಕೆ ಕರೆಸಿಕೊಂಡು ಕುರಿತಾದ ಮಾಧ್ಯಮವರದಿಗಳನ್ನು ತಳ್ಳಿ ಹಾಕಿದ್ದ ಚೀನಾ, ಗಡಿ ವಿತಾರದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಮೊದಲು ಭಾರತ ತನ್ನ ಸೇನೆಯನ್ನು ಬೇಷರತ್ತಾಗಿ ಹಿಂದಕ್ಕೆ ಕರೆಸಿಕೊಳ್ಳದ ಹೊರತು ಚೀನಿ ಸೈನಿಕರು ಹಿಂದಡಿ ಇಡುವುದಿಲ್ಲ ಎಂದು ಚೀನಾ ಸರ್ಕಾರ ಸ್ಪಷ್ಟ ಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ