ಫಿಲಿಪ್ಪೀನ್ಸ್ ಶಾಪಿಂಗ್ ಮಾಲ್'ನಲ್ಲಿ ಅಗ್ನಿ ಅವಘಡ 
ವಿದೇಶ

ಫಿಲಿಪ್ಪೀನ್ಸ್ ಶಾಪಿಂಗ್ ಮಾಲ್'ನಲ್ಲಿ ಅಗ್ನಿ ಅವಘಡ; 37 ಜನರ ಸಾವು

ಫಿಲಿಪ್ಪೀನ್ಸ್'ನ ದಾವೋವ್ ನಗರದಲ್ಲಿನ ಶಾಪಿಂಗ್ ಮಾಲ್'ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ...

ಮನಿಲಾ: ಫಿಲಿಪ್ಪೀನ್ಸ್'ನ ದಾವೋವ್ ನಗರದಲ್ಲಿನ ಶಾಪಿಂಗ್ ಮಾಲ್'ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಕ್ರಿಸ್'ಮಸ್ ಹಬ್ಬ ಹಿನ್ನಲೆಯಲ್ಲಿ ನಿನ್ನೆ ಸಂಜೆ ಮಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದವರೆಲ್ಲಾ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 
ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಟ್ಟೆ ಮಳಿಗೆಗಳು, ಪೀಠೋಪಕರಣಗಳು ಹಾಗೂ ಪ್ಲಾಸ್ಟಿಕ್ ವೇರ್ ಮಳಿಗೆಗಳು ಅದ್ದ ಕಾರಣ ಬೆಂಕಿಯ ನರ್ತನ ಮತ್ತಷ್ಟು ಹೆಚ್ಚಾಗಿದೆ. ಬಹುಬೇಗನೆ ಬೆಂಕಿಯ ಕೆನ್ನಾಲಿಗೆ ಇತರೆಡೆಗಳಿಗೂ ಆವರಣಿಸಿದ ಪರಿಣಾಮ ಸ್ಥಳದಲ್ಲಿ ಆವರಿಸಿದ್ದ ದಟ್ಟ ಹೊಗೆಯ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುವಂತೆ ಮಾಡಿತ್ತು. 
ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಜನರನ್ನು ರಕ್ಷಣೆ ಮಾಡಿ, ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಗಾಯಾಳುಗಳು ಬದುಕುಳಿಯುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)