ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅಫ್ಘಾನಿಸ್ತಾನ-ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ವಹಿಸಲು ಚೀನಾ ಸಭೆ

ಅಫ್ಘಾನಿಸ್ತಾನ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಚೀನಾ ಡಿ.26 ರಂದು ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಅಧಿಕಾರಿಗಳ ಸಭೆಯನ್ನು ಆಯೋಜಿಸಿದೆ.

ಚೀನಾ
Srinivas Rao BV
Updated On : 26 Dec 2017, 7:09 am
ಬೀಜಿಂಗ್: ಅಫ್ಘಾನಿಸ್ತಾನ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಚೀನಾ ಡಿ.26 ರಂದು ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಅಧಿಕಾರಿಗಳ ಸಭೆಯನ್ನು ಆಯೋಜಿಸಿದೆ. 
ಪಾಕಿಸ್ತಾನ ವಿದೇಶಾಂಗ ಇಲಾಖೆ, ಅಫ್ಘಾನಿಸ್ತಾನ ವಿದೇಶಾಂಗ ಇಲಾಖೆ ಹಾಗೂ ಚೀನಾ ವಿದೇಶಾಂಗ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದು, ಮೂರು ರಾಷ್ಟ್ರಗಳ ನಡುವೆ ಆರ್ಥಿಕ ಭದ್ರತಾ ಸಹಕಾರವನ್ನು ಉತ್ತೇಜಿಸುವ ಬಗ್ಗೆ ಮಾತುಕತೆಗಳು ನಡೆದಿವೆ.
ಪಾಕಿಸ್ತಾನದಲ್ಲಿ ಎಕನಾಮಿಕ್ ಕಾರಿಡಾರ್ ಯೋಜನೆಯನ್ನು ಪ್ರಾರಂಭಿಸಿ ಆರ್ಥಿಕ ಹಿತಾಸಕ್ತಿಗಳನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ ಚೀನಾ ಅಫ್ಘಾನಿಸ್ತಾ-ಪಾಕಿಸ್ತಾನ ಸಂಘರ್ಷಕ್ಕೆ ಮಧ್ಯಸ್ಥಿಕೆ ವಹಿಸಲು ಉತ್ಸುಕವಾಗಿದ್ದು ಉಭಯ ರಾಷ್ಟ್ರಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. 

Advertisement

Advertisement

ಶಾಂತಿ ಪ್ರಕ್ರಿಯೆಯಲ್ಲಿ ಹಾಗೂ ಪಾಕಿಸ್ತಾನದೊಂದಿಗಿನ ಸಂಬಂಧ ಸುಧಾರಿಸುವಂತೆ ಮಾಡುವುದರಲ್ಲಿ ನೆರವು ನೀಡುವುದಾಗಿ ಚೀನಾ ಭರವಸೆ ನೀಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments