ಈಜಿಪ್ಟ್: ದಕ್ಷಿಣ ಕೈರೋದ ಚರ್ಚ್ವೊಂದರ ಬಳಿ ಶೂಟೌಟ್, 10 ಸಾವು
ದಕ್ಷಿಣ ಕೈರೋದ ಚರ್ಚ್ ಒಂದರ ಬಳಿ ಬಂಧೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ...
ಕೈರೋ: ದಕ್ಷಿಣ ಕೈರೋದ ಚರ್ಚ್ ಒಂದರ ಬಳಿ ಬಂಧೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ.
ಚರ್ಚ್ ಬಳಿ ಬಂಧೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಸ್ಥಳದಲ್ಲೇ 9 ಮಂದಿ ಸಾವನ್ನಪ್ಪಿದ್ದು ಹಲವು ಗಾಯಗೊಂಡಿದ್ದಾರೆ. ಇನ್ನು ಬಂಧೂಕುದಾರಿಯನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಆರೋಗ್ಯ ಇಲಾಖೆ ವಕ್ತಾರ ಖಲೀದ್ ಹೇಳಿದ್ದಾರೆ.
ಬಂಧೂಕುದಾರಿ ವ್ಯಕ್ತಿಯೊಬ್ಬ ಚರ್ಚ್ ಒಳಗೆ ನುಗ್ಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಭದ್ರತೆಯಲ್ಲಿ ತೊಡಗಿದ್ದ ಪೊಲೀಸರು ಆತನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಇನ್ನು ಮತೋರ್ವ ಬಂಧೂಕುದಾರಿಯೊರ್ವ ಘಟನಾ ಸ್ಥಳದಿಂದ ಪರಾರಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.