ಇಸ್ಲಾಮಾಬಾದ್: ಭಾರತದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪತ್ನಿ ಹಾಗೂ ತಾಯಿಯೊಂದಿಗೆ ಪಾಕಿಸ್ತಾನ ಅಮಾನವೀಯವಾಗಿ ನಡೆದುಕೊಂಡಿದೆ ಎಂಬ ಭಾರತದ ಆರೋಪವನ್ನು ಪಾಕಿಸ್ತಾನ ಶುಕ್ರವಾರ ತಳ್ಳಿಹಾಕಿದೆ.
ಸಾಕಷ್ಟು ಹಗ್ಗಜಗ್ಗಾದ ಬಳಿಕ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲು ಜಾಧವ್ ಅವರ ತಾಯಿ ಹಾಗೂ ಪತ್ನಿಗೆ ಕೆಲ ದಿನಗಳ ಹಿಂದಷ್ಟೇ ಅವಕಾಶ ಮಾಡಿಕೊಟ್ಟಿದ್ದ ಇಬ್ಬರೊಂದಿಗೆ ಅಮಾನವೀಯವಾಗಿ ನಡೆದುಕೊಂಡಿತ್ತು. ತಮ್ಮ ಪುತ್ರನನ್ನು ಭೇಟಿ ಮಾಡಲು ಹೋಗಿದ್ದ ತಾಯಿಯೊಂದಿಗೆ ಮಾತೃಭಾಷಣೆಯಲ್ಲಿ ಮಾತನಾಡಲು ಪಾಕ್ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರು. ಅಲ್ಲದೆ, ಭೇಟಿಗೂ ಮುನ್ನ ಜಾಧವ್ ಪತ್ನಿ ಅವರ ಬಿಂದಿ, ಮಂಗಳಸೂತ್ರ, ಚಪ್ಪಲಿಗಳನ್ನು ತೆಗೆಸಿದ್ದರು. ಮರಳಿ ತೆರಳುವ ವೇಳಯೂ ಜಾಧವ್ ಪತ್ನಿ ಪಾದರಕ್ಷೆಗಳನ್ನು ವಾಪಸ್ ನೀಡುವಂತೆ ಕೇಳಿದರೂ ವಾಪಸ್ ನೀಡಿಲ್ಲ ಎಂದು ಹೇಳಲಾಗುತ್ತಿತ್ತು.
ಈ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ವಿದೇಶಾಂಗ ಸಚಿವ ಖ್ವಾಜಾ ಆಸೀಫ್ ಅವರು, ಭದ್ರತಾ ದೃಷ್ಟಿಯಿಂದ ಕೆಲ ಪ್ರಕ್ರಿಯೆಗಳನ್ನು ಪಾಲನೆ ಮಾಡಬೇಕಿತ್ತು. ಭೇಟಿಯ ಕಾಲಾವಕಾಶವನ್ನು 30 ನಿಮಿಷಗಳ ಕಾಲ ನಿಗದಿ ಮಾಡಲಾಗಿತ್ತು. ಮನವಿಯ ಬಳಿಕ 40 ನಿಮಿಷಗಳಿಗೆ ವಿಸ್ತರಿಸಲಾಗಿತ್ತು. ಕಾಲಾವಧಿಯನ್ನು ವಿಸ್ತರಿಸಿದ ಬಳಿಕ ಜಾಧವ್ ತಾಯಿಯವರೇ ಪಾಕಿಸ್ತಾನಕ್ಕೆ ಧನ್ಯವಾದಗಳನ್ನು ಹೇಳಿದ್ದರು ಎಂದು ಹೇಳಿದ್ದಾರೆ.
ಆರೋಪ ಮಾಡುವುದಲ್ಲಿ ನಾವು ಭಾಗಿಯಾಗುವುದಿಲ್ಲ. ಭೇಟಿಯಿಂದ ಧನಾತ್ಮಕ ಫಲಿತಾಂಶಗಳತ್ತ ನಾವು ಗಮನಹರಿಸಬೇಕಿದೆ. ಭೇಟಿಯ ಉದ್ದಕ್ಕೂ ಪಾಕಿಸ್ತಾನ ಪಾರದರ್ಶವಕವಾಗಿದೆ ನಂಬಿಕೆಯೊಂದಿಗೆ ನಾವು ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದೆವು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics