ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
ಮಾಸ್ಕೋ: ಹೊಸ ವರ್ಷಕ್ಕೆ ಇನ್ನು ಕೇವಲ ಒಂದು ದಿನ ಬಾಕಿಯಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶುಭಾಶಯ ಸಂದೇಶವನ್ನು ಕಳುಹಿಸಿದ್ದಾರೆ.
ಕ್ರೆಮ್ಲಿನ್ ನಲ್ಲಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಇಂಡೋ-ರಷ್ಯಾ ಸಂಬಂಧಕ್ಕೆ 70 ವರ್ಷ ಪೂರ್ಣಗೊಂಡಿದ್ದು, ಹೊಸ ವರ್ಷ ಉಭಯ ರಾಷ್ಟ್ರಗಳಿಗೆ ಪ್ರಮುಖ ಮೈಲುಗಲ್ಲಾಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ 2017ನೇ ಸಾಲಿನಲ್ಲಿ ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧ ಉತ್ತಮವಾಗಿ ಸಾಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಭವಿಷ್ಯದಲ್ಲಿಯೂ ಇಂಡೋ ರಷ್ಯಾ ನಡುವಿನ ರಾಜಕೀಯ, ವ್ಯಾಪಾರ, ಆರ್ಥಿಕತೆ, ವಿಜ್ಞಾನ,ತಂತ್ರಜ್ಞಾನ, ಸಂಸ್ಕೃತಿಯ ಸಂಬಂಧಗಳು ಹೀಗೆಯೇ ಉತ್ತಮವಾಗಿರಲಿದೆ ಎಂದು ವಿಶ್ವಾಸವಿಟ್ಟಿದ್ದೇನೆಂದು ತಿಳಿಸಿದ್ದಾರೆ.
ವಿಶ್ವಸಂಸ್ಥೆ, ಬ್ರಿಕ್ಸ್, ಶಾಂಘೈ ಸಹಕಾರ ಒಕ್ಕೂಟ ಹಾಗೂ ಇತರೆ ವಿಶ್ವ ಸಮುದಾಯದೊಂದಿಗೆ ಕೈಜೋಡಿಸಿರುವ ಭಾರತ, ಜಾಗತಿಕ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಉತ್ತಮವಾಗಿ ಪಾಲ್ಗೊಳ್ಳುತ್ತಿರುವುದನ್ನು ಇದೇ ವೇಳೆ ಪುಟಿನ್ ಅವರು ಶ್ಲಾಘಿಸಿದ್ದಾರೆ.