ವಿಧಾನಸಭಾ ಚುನಾವಣೆಗಳ ಬಳಿಕ ದ್ವಿಪಕ್ಷೀಯ ಮಾತುಕತೆ ಸಾಧ್ಯ: ಪಾಕ್ ವಿಶ್ವಾಸ 
ವಿದೇಶ

ವಿಧಾನಸಭಾ ಚುನಾವಣೆಗಳ ಬಳಿಕ ದ್ವಿಪಕ್ಷೀಯ ಮಾತುಕತೆ ಸಾಧ್ಯ: ಪಾಕ್ ವಿಶ್ವಾಸ

ಪಂಚರಾಜ್ಯಗಳ ಚುನಾವಣೆ ಬಳಿಕ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಪಾಕಿಸ್ತಾನದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.

ಇಸ್ಲಾಮಾಬಾದ್: ಪಂಚರಾಜ್ಯಗಳ ಚುನಾವಣೆ ಬಳಿಕ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಪಾಕಿಸ್ತಾನದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ. 
"ಮಾರ್ಚ್ ವೇಳೆಗೆ ಭಾರತದಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯಗೊಳ್ಳಲಿದ್ದು, ನಂತರದ ದಿನಗಳಲ್ಲಿ ಪಾಕಿಸ್ತಾನ- ಭಾರತ ದ್ವಿಪಕ್ಷೀಯ ಮಾತುಕತೆ ನಡೆಸಲು ಸಾಧ್ಯವಾಗಲಿದೆ, ಪಾಕಿಸ್ತಾನ ಮಾತ್ರ ಮಾತುಕತೆ ನಡೆಸುವುದಕ್ಕೆ ಬದ್ಧವಾಗಿದೆ ಎಂದು ಯೋಜನಾ ಮತ್ತು ಅಭಿವೃದ್ಧಿ ಸಚಿವ ಇಕ್ಬಾಲ್ ಹೇಳಿದ್ದಾರೆ. 
ಶಾಂತಿಗೆ ಸಂಬಂಧಿಸಿದ ಅಮೆರಿಕಾದ ಥಿಂಕ್ ಟ್ಯಾಂಕ್ ನ ಪ್ರಶ್ನೆಗೆ ಉತ್ತರಿಸಿರುವ ಇಕ್ಬಾಲ್, ಭಾರತದ ವಿಧಾನಸಭಾ ಚುನಾವಣೆಗಳಲ್ಲಿ ಪಾಕಿಸ್ತಾನ ಚುನಾವಣಾ ವಿಷಯವಾಗುವುದಿಲ್ಲ. ಪಾಕಿಸ್ತಾನದಲ್ಲಿ ನಡೆಯುವ ಚುನಾವಣೆಗಳಲ್ಲಿ ಭಾರತದ ಪ್ರಸ್ತಾಪವಾಗುವುದಿಲ್ಲ. ಆದರೆ ಭಾರತದ ಚುನಾವಣೆಗಳಲ್ಲಿ ಪಾಕಿಸ್ತಾನ ಚುನಾವಣಾ ವಿಷಯವಾಗಿರಬಹುದು ಎನಿಸುತ್ತಿದೆ.  ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಚುನಾವಣೆ ನಡೆದರೆ ಪಾಕಿಸ್ತಾನ ಚುನಾವಣಾ ವಿಷಯವಾಗಿರಲಿದೆ. ಆದ್ದರಿಂದ ವಿಧಾನಸಭಾ ಚುನಾವಣೆ ನಂತರ ಮಾತುಕತೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಬಹುದೆಂದು ಸಚಿವ ಇಕ್ಬಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!